ಕನ್ನಡದ ಬಿಗ್ಬಾಸ್ ಸೀಸನ್ 12ರ ವಿಜೇತರು ಯಾರಾಗಲಿದ್ದಾರೆ ಎಂದು ವೀಕ್ಷಕರು ಕಾತರದಿಂದ ಕಾಯುತ್ತಿದ್ದರು. ಇದೀಗ ಈ ಬಾರಿಯ ಬಿಗ್ಬಾಸ್ 12ರ ವಿಜೇತರ ಹೆಸರನ್ನು ಕಿಚ್ಚ ಸುದೀಪ್ ಅವರು ವೇದಿಕೆ ಮೇಲೆ ಘೋಷಿಸಿದ್ದಾರೆ.
.ಈ ಬಾರಿಯ ಬಿಗ್ಬಾಸ್ ಟ್ರೋಫಿಯಲ್ಲಿವೆ ಹಲವು ವಿಶೇಷತೆ: ಏನವು? .Video | ಗಿಲ್ಲಿಯೇ ಬಿಗ್ಬಾಸ್ ವಿನ್ನರ್: ಟೇಬಲ್ ಕುಟ್ಟಿ ಹೇಳಿದ ಶಿವರಾಜ್ಕುಮಾರ್.
ಬರೋಬ್ಬರಿ 37 ಕೋಟಿಗೂ ಅಧಿಕ ವೋಟ್ಗಳನ್ನು ಪಡೆಯುವ ಮೂಲಕ ಗಿಲ್ಲಿ ನಟ ಅವರು ಈ ಬಾರಿಯ ಬಿಗ್ಬಾಸ್ ಸೀಸನ್ 12ರ ವಿಜೇತರಾಗಿ ಹೊರಹೊಮ್ಮಿದ್ದಾರೆ. ರಕ್ಷಿತಾ ಶೆಟ್ಟಿ ಅವರು ರನ್ನರ್ ಅಪ್ ಆಗಿದ್ದಾರೆ.

ಈ ಬಾರಿ ಟಾಪ್ 5 ಸ್ಥಾನದಲ್ಲಿ ಕಾವ್ಯ, ರಘು, ಅಶ್ವಿನಿ ಗೌಡ, ಗಿಲ್ಲಿ ನಟ ಹಾಗೂ ರಕ್ಷಿತಾ ಇದ್ದರು. ಈ ಟಾಪ್ 5 ಫೈನಲಿಸ್ಟ್ಗಳ ಪೈಕಿ ಗಿಲ್ಲಿ ನಟ ಬಿಗ್ಬಾಸ್ ಸೀಸನ್ 12ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಅಂತಿಮವಾಗಿ ಗಿಲ್ಲಿ ನಟ ಮತ್ತು ರಕ್ಷಿತಾ ಶೆಟ್ಟಿ ಇಬ್ಬರ ಮಧ್ಯೆ ಪೈಪೋಟಿ ಜೋರಾಗಿತ್ತು.

ಕೊನೆಗೂ ಗಿಲ್ಲಿ ನಟ ಬಿಗ್ಬಾಸ್ ಗೆದ್ದು ಬೀಗಿದ್ದಾರೆ. ಇನ್ನು, ಗಿಲ್ಲಿ ನಟ ಅವರು ಟ್ರೋಫಿಯೊಂದಿಗೆ ₹50 ಲಕ್ಷ ಹಾಗೂ ಮಾರುತಿ ಸುಜುಕಿ ಎಸ್ಯುವಿ ವಿಕ್ಟೋರಿಯಸ್ ಕಾರನ್ನು ತಮ್ಮದಾಗಿಸಿಕೊಂಡಿದ್ದಾರೆ. ತಮ್ಮ ಕಾಮಿಡಿ ಮೂಲಕವೇ ವೀಕ್ಷಕರ ಮನಸ್ಸನ್ನು ಗೆದ್ದುಕೊಂಡಿದ್ದರು. ಇದೀಗ ಕೊನೆಯದಾಗಿ ಬಿಗ್ಬಾಸ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.