ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಮಂಜು ಪಾವಗಡ

Last Updated 24 ಆಗಸ್ಟ್ 2021, 13:02 IST
ಅಕ್ಷರ ಗಾತ್ರ

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 8ರ ವಿಜೇತ ಮಂಜು ಪಾವಗಡ ಅವರು ಕುಟುಂಬ ಸಮೇತರಾಗಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಬಿಗ್‌ ಬಾಸ್‌ ಕಾರ್ಯಕ್ರಮ ಮುಗಿದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ. ಬಿಗ್‌ ಬಾಸ್‌ ಮನೆಯಲ್ಲಿ ತಾವು ಹೆಚ್ಚು ಆರಾಧಿಸುವ ದೇವರ ಬಗ್ಗೆ ಹೇಳುವಂತೆ ಸ್ಫರ್ಧಿಗಳಿಗೆ ಅವಕಾಶ ನೀಡಲಾಗಿತ್ತು. ಈ ವೇಳೆ ಮಂಜು ಪಾವಗಡ ಅವರು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಬಗ್ಗೆ ಹೇಳಿಕೊಂಡಿದ್ದರು.

ಇದೀಗ ಮಂಜು ಅವರು ಕುಟುಂಬ ಸದಸ್ಯರೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ದೇವರ ದರ್ಶನ ಪಡೆದ ನಂತರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ‌ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ಫೋಟೊಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT