ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bigg Boss Kannada | ನಾಮಿನೇಷನ್ ಟಾಸ್ಕ್: ಕಾರ್ತಿಕ್–ತನಿಷಾ ಜಿದ್ದಾಜಿದ್ದಿ

Published 9 ಜನವರಿ 2024, 6:47 IST
Last Updated 9 ಜನವರಿ 2024, 6:47 IST
ಅಕ್ಷರ ಗಾತ್ರ

ಬಿಗ್‌ಬಾಸ್‌ 10ನೇ ಸೀಸನ್‌ ಮುಗಿಯಲು ಇನ್ನೇನು ಕೆಲವು ದಿನಗಳು ಬಾಕಿ ಇದೆ. ಈ ನಡುವೆ ದೊಡ್ಮನೆಯಲ್ಲಿ ಸ್ಪರ್ಧಿಗಳ ನಡುವೆ ಜಿದ್ದಾಜಿದ್ದಿ ಶುರುವಾಗಿದೆ.

ಈ ವಾರದ ನಾಮಿನೇಷನ್‌ ಪ್ರಕ್ರಿಯೆ ಭಾಗವಾಗಿ ಎಲ್ಲ ಸ್ಪರ್ಧಿಗಳ ಎದೆಯ ಮೇಲೆ ಹೃದಯಾಕಾರದ ಬೋರ್ಡ್‌ ಅನ್ನು ನೇತುಹಾಕಲಾಗಿದೆ. ಸಂಗೀತಾ ಹೊರತುಪಡಿಸಿ ಎಲ್ಲ ಸ್ಪರ್ಧಿಗಳೂ ತಾವು ನಾಮಿನೇಷನ್ ಮಾಡಲು ಇಚ್ಛಿಸುವ ಇಬ್ಬರು ಸ್ಪರ್ಧಿಗಳ ಹೆಸರು ಹೇಳಿ ಅವರ ಕತ್ತಿನಲ್ಲಿ ತೂಗು ಹಾಕಲಾಗಿರುವ ಬೋರ್ಡ್‌ಗೆ ಬಾಕುವಿನಿಂದ ಚುಚ್ಚಿ ನಾಮಿನೇಷನ್‌ ಮಾಡಬೇಕು.

ಈ ಚಟುವಟಿಕೆಯಲ್ಲಿ ಕಾರ್ತಿಕ್‌ ಅವರು ತನಿಷಾ ಅವರ ಹೆಸರನ್ನು ಸೂಚಿಸಿದ್ದಾರೆ. ತನಿಷಾ, ನಮ್ರತಾ ಅವರ ಹೆಸರು ಹೇಳಿದ್ದಾರೆ. ವಿನಯ್‌ ಮತ್ತು ಪ್ರತಾಪ್ ಮಾತಿನ ಸಮರ ನಾಮಿನೇಷನ್‌ ನಡುವೆಯೂ ಕಾಣಿಸಿಕೊಂಡಿದೆ. ಅವರಿಬ್ಬರೂ ಪರಸ್ಪರ ನಾಮಿನೇಷನ್‌ ಮಾಡಿಕೊಂಡಿರುವ ದೃಶ್ಯಗಳು ಜಿಯೊ ಸಿನಿಮಾ ಬಿಡುಗಡೆ ಮಾಡಿರುವ ವಿಡಿಯೊದಲ್ಲಿದೆ.

ಹಾಗಾದರೆ ಈ ವಾರ ನಾಮಿನೇಟ್ ಆಗುವ ಸ್ಪರ್ಧಿಗಳು ಯಾರು ಯಾರು? ಅವರಲ್ಲಿ ಯಾರು ಬಚಾವ್‌ ಆಗಲಿದ್ದಾರೆ? ಯಾರ ಪಾಲಿಗೆ ಬಿಗ್‌ಬಾಸ್ ಮನೆಯ ಬಾಗಿಲು ಶಾಶ್ವತವಾಗಿ ಮುಚ್ಚಲಿದೆ ಎಂಬುದನ್ನು ತಿಳಿದುಕೊಳ್ಳಲು ಕಿಚ್ಚನ ಪಂಚ್ತಾಯಿವರೆಗೂ ಕಾಯಲೇಬೇಕು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT