ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BBK 10 Grand Finale: 3ನೇ ರನ್ನರ್‌ ಅಪ್‌ ಆಗಿ ಮನೆಯಿಂದ ಹೊರಬಂದ ವಿನಯ್‌ ಗೌಡ

Published 28 ಜನವರಿ 2024, 16:27 IST
Last Updated 28 ಜನವರಿ 2024, 16:27 IST
ಅಕ್ಷರ ಗಾತ್ರ

ಬೆಂಗಳೂರು: ಬಿಗ್‌ಬಾಸ್‌ ಕನ್ನಡ 10ನೇ ಸೀಸನ್‌ ಮೂರನೇ ರನ್ನರ್ ಅಪ್ ಆಗಿ ವಿನಯ್ ಗೌಡ ಅವರು ಮನೆಯಿಂದ ಹೊರಗೆ ಬಂದಿದ್ದಾರೆ. 

ಎಲಿಮಿನೇಷನ್‌ ಚಕ್ರದ ಕುರ್ಚಿಯಲ್ಲಿ ಕಾರ್ತಿಕ್, ಸಂಗೀತಾ, ಪ್ರತಾಪ್‌ ಮತ್ತು ವಿನಯ್ ಕೂತಿದ್ದರು. ತಿರುಗುಣಿ ತಿರುಗುತ್ತಿದ್ದ ಹಾಗೆಯೇ ಮೂವರ ಉಸಿರೂ ಅಷ್ಟೇ ಏರಿಳಿಯುತ್ತಿತ್ತು. ಎಲ್ಲ ಸ್ಪರ್ಧಿಗಳು ಕಣ್ಣುಮುಚ್ಚಿ ಪ್ರಾರ್ಥಿಸುತ್ತಿದ್ದರು. ಕೊನೆಗೂ ವಿನಯ್‌ ಎದುರಿಗೆ ಬಂದಾಗ ಮನೆಯ ಬಾಗಿಲು ತೆರೆದುಕೊಂಡಿತು. ವಿನಯ್ ಮನೆಯಿಂದ ಹೊರಬಂದರು.

ಈಗ ಕೊನೆಯ ಹಣಾಹಣಿಯಲ್ಲಿ ಕಾರ್ತಿಕ್‌, ಪ್ರತಾಪ್‌, ಸಂಗೀತಾ ಉಳಿದುಕೊಂಡಿದ್ದಾರೆ.

ಬಿಗ್‌ ಬಾಸ್‌ ಮನೆಯಲ್ಲಿ ಜೋರು ಧ್ವನಿ, ವಾಗ್ವಾದಗಳಿಂದಲೇ ಹೆಸರಾಗಿದ್ದ ವಿನಯ್‌ ಗೌಡ. ‘ನಾನು ವಿಲನ್ ಆಗಲು ಬಂದಿದ್ದೇನೆ’ ಎಂದು ಹೇಳಿಕೊಂಡು ಬಿಗ್‌ ಬಾಸ್‌ ಮನೆಗೆ ಬಂದಿದ್ದರು.

ಅತಿ ಹೆಚ್ಚು ಬಾರಿ ಸಂಗೀತಾ, ಕಾರ್ತಿಕ್ ಜೊತೆಗೆ, ನಂತರದ ದಿನಗಳಲ್ಲಿ ಪ್ರತಾಪ್ ಜೊತೆಗೆ ಅವರ ಮಾತಿನ ಚಕಮಕಿ ನಡೆಯುತ್ತಲೇ ಇತ್ತು. ಆದರೆ ಈ ಮೂವರು ಈಗ ಫೈನಲ್‌ನಲ್ಲಿದ್ದು ವಿನಯ್‌ ಹೊರಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT