ಸೋಮವಾರ, ಸೆಪ್ಟೆಂಬರ್ 20, 2021
29 °C

ಪರಮ ಸುಂದರಿಯಾಗಿ ಹೆಜ್ಜೆ ಹಾಕಿದ ಬಿಗ್ ಬಾಸ್ ಖ್ಯಾತಿಯ ವೈಷ್ಣವಿ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Vaishnavi Gowda Instagram Post screengrab

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಸ್ಪರ್ಧಿಯಾಗಿ ಗಮನ ಸೆಳೆದಿದ್ದ ನಟಿ ವೈಷ್ಣವಿ ಗೌಡ, ಈಗ ಪರಮ ಸುಂದರಿಯಾಗಿದ್ದಾರೆ.

ಬಾಲಿವುಡ್‌ನ ಜನಪ್ರಿಯ ‘ಪರಮ ಸುಂದರಿ’ ಹಾಡಿಗೆ ಹೆಜ್ಜೆ ಹಾಕಿರುವ ನಟಿ ವೈಷ್ಣವಿ ಗೌಡ, ಅದನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ರೀಲ್ಸ್ ಮೂಲಕ ಪೋಸ್ಟ್ ಮಾಡಿದ್ದಾರೆ.

ವೈಷ್ಣವಿ ಅವರ ರೀಲ್ಸ್ ವಿಡಿಯೊಗೆ ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಿಕೆ ಸ್ಟುಡಿಯೋದ ಪ್ರಸಾದ್ ಅವರು ವೈಷ್ಣವಿಯ ಪರಮ ಸುಂದರಿ ವಿಡಿಯೊದ ಚಿತ್ರೀಕರಣ ಮಾಡಿದ್ದಾರೆ.

ವೈಷ್ಣವಿ ಬಿಗ್‌ಬಾಸ್ ಪ್ರವೇಶಿಸುವುದಕ್ಕೂ ಮೊದಲು, ‘ಅಗ್ನಿಸಾಕ್ಷಿ’ ಕನ್ನಡ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದರು. ಜತೆಗೆ ‘ದೇವಿ’ ಕೂಡ ಅವರಿಗೆ ಹೆಸರು ತಂದುಕೊಟ್ಟಿತ್ತು.

ಬೆಂಗಳೂರಿನವರಾದ ವೈಷ್ಣವಿ ಗೌಡ, ಸಿನಿಮಾ ರಂಗದಲ್ಲಿ ಮಾತ್ರವಲ್ಲದೆ, ವಿವಿಧ ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು