ಮಂಗಳವಾರ, ಜನವರಿ 25, 2022
24 °C

ಕಮಲ್ ಹಾಸನ್‌ಗೆ ಕೋವಿಡ್: ತಮಿಳು ಬಿಗ್ ಬಾಸ್ ನಿರೂಪಿಸಲಿದ್ದಾರೆ ನಟಿ ರಮ್ಯಾ ಕೃಷ್ಣ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಚೆನ್ನೈ: ಬಹುಭಾಷಾ ನಟಿ ರಮ್ಯಾ ಕೃಷ್ಣ ಅವರು ತಮಿಳಿನ ‘ಬಿಗ್‌ ಬಾಸ್‌ –5’ ಕಾರ್ಯಕ್ರಮವನ್ನು ನಿರೂಪಿಸಲಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿಗೆ ತಮಿಳು ಸೂಪರ್ ಸ್ಟಾರ್ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಇದನ್ನೂ ಓದಿ... ಕಮಲ್ ಹಾಸನ್‌ಗೆ ಕೋವಿಡ್ ಪಾಸಿಟಿವ್

ಕಮಲ್‌ ಹಾಸನ್‌ ಅವರ ಅನುಪಸ್ಥಿತಿಯಿಂದಾಗಿ ರಮ್ಯಾ ಕೃಷ್ಣ ಅವರು ಬಿಗ್‌ ಬಾಸ್‌ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ರಮ್ಯಾ ಕೃಷ್ಣ, ಈಗಾಗಲೇ ತೆಲುಗಿನ ಬಿಗ್‌ ಬಾಸ್‌ ಕಾರ್ಯಕ್ರಮವನ್ನು ನಡೆಸಿಕೊಟ್ಟಿರುವ ಅನುಭವ ಹೊಂದಿದ್ದಾರೆ. ಸದ್ಯ ರಮ್ಯಾ ಅವರು ‘ಬಂಗಾರರಾಜು’ ಚಿತ್ರದಲ್ಲಿ ನಾಗರ್ಜುನಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಚಿತ್ರ ಇನ್ನಷ್ಟೆ ಬಿಡುಗಡೆಯಾಗಬೇಕಿದೆ.

ಇದನ್ನೂ ಓದಿ...  ಡ್ರಗ್ಸ್​ ಪ್ರಕರಣದಲ್ಲಿ ಸಿಕ್ಕಿಬಿದ್ದ ಮಗನ ಜತೆ ಪೋಸ್ ಕೊಟ್ಟ ತಂದೆ: ವಿಡಿಯೊ ವೈರಲ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು