ಮುಂಬೈ: ಬಾಲಿವುಡ್ ನಟಿ ಕಂಗನಾ ರನೌತ್ ಅವರ ನಿರೂಪಣೆಯಲ್ಲಿ ಮೂಡಿಬರಲಿರುವ ‘ಲಾಕ್ ಅಪ್’ ರಿಯಾಲಿಟಿ ಶೋನ ಟೀಸರ್ ಶುಕ್ರವಾರ ಬಿಡುಗಡೆಯಾಗಿದೆ.

ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್ ‘ಲಾಕ್ ಅಪ್’ ಶೋ ಅನ್ನು ನಿರ್ಮಿಸುತ್ತಿದ್ದಾರೆ. ಎಂಎಕ್ಸ್ ಪ್ಲೇಯರ್ ಹಾಗೂ ಆಲ್ಟ್ ಬಾಲಾಜಿ ಓಟಿಟಿಗಳಲ್ಲಿ ಫೆಬ್ರುವರಿ 27ರಿಂದ ಕಾರ್ಯಕ್ರಮ ಪ್ರಸಾರವಾಗಲಿದೆ.

ಈ ಶೋನಲ್ಲಿ 16 ಮಂದಿ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಎಲ್ಲರೂ ಜೈಲಿನಲ್ಲಿ ಬಂಧಿಯಾಗಿರುತ್ತಾರೆ. ಅವರಿಗೆ ವಿವಿಧ ಟಾಸ್ಕ್‌ಗಳನ್ನು ನೀಡಲಾಗುತ್ತದೆ. ಇದರ ಆಧಾರದಲ್ಲಿ ಸ್ಪರ್ಧೆ ನಡೆಯಲಿದೆ. ಭಾಗವಹಿಸುವ ಸೆಲೆಬ್ರಿಟಿಗಳು ಯಾರೆಂಬುದು ಇನ್ನಷ್ಟೇ ಪ್ರಕಟವಾಗಬೇಕಿದೆ.

ಕಂಗನಾ, ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತಪ್ಪು ಮಾಡಿದ ಸ್ಪರ್ಧಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಕ್ರಮ ಜರುಗಿಸಲಿದ್ದಾರೆ.

ಸದ್ಯ ಬಿಡುಗಡೆಯಾಗಿರುವ ಟೀಸರ್ ಅನ್ನು ಕಂಗನಾ ರನೌತ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಓದಿ... ಅಪ್ಪು ಜೊತೆಗಿನ ಕೊನೆ ಕ್ಷಣದ ವಿಡಿಯೊ ಹಂಚಿಕೊಂಡ ನಟ ಜಗ್ಗೇಶ್: ಹೇಳಿದ್ದೇನು?

ಓದಿ... ಪುನೀತ್ ನಿರ್ಮಾಣದ ‘ಫ್ಯಾಮಿಲಿ ಪ್ಯಾಕ್’ ಟ್ರೇಲರ್ನಲ್ಲಿ ನಗುವಿನ ಗಮ್ಮತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.