ಭಾನುವಾರ, ಆಗಸ್ಟ್ 1, 2021
23 °C

800ರ ಸಂಭ್ರಮದಲ್ಲಿ ‘ಬ್ರಹ್ಮಗಂಟು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

brahmagantu

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಬ್ರಹ್ಮಗಂಟು’ 800 ಕಂತುಗಳನ್ನು ಪೂರೈಸಿದ ಸಂಭ್ರಮದಲ್ಲಿ ಇದೆ. 

2017ರ ಮೇ 8ರಂದು ಆರಂಭವಾದ ಈ ಧಾರಾವಾಹಿಯ ನಿರ್ಮಾಣ ಮತ್ತು ನಿರ್ದೇಶನ ಶ್ರುತಿ ನಾಯ್ಡು ಅವರದ್ದು. ‘ಇದು ನಮ್ಮ ವಾಹಿನಿಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದು. ಇದರಲ್ಲಿ ಬರುವ ಗೀತಾ ಪಾತ್ರವು ನಮ್ಮ ನಡುವಿನ ಅದೆಷ್ಟೋ ಹೆಣ್ಣುಮಕ್ಕಳನ್ನು ಪ್ರತಿನಿಧಿಸುತ್ತದೆ. ಎಷ್ಟೋ ಜನ ಯುವತಿಯರು ಈ ಪಾತ್ರದಲ್ಲಿ ತಮ್ಮನ್ನು ಕಂಡುಕೊಂಡಿದ್ದಾರೆ’ ಎಂದು ವಾಹಿನಿಯ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಹೇಳಿದ್ದಾರೆ.

ಭಾರತಿ ಭಟ್ ಇದರಲ್ಲಿ ಗೀತಾಳ ಪಾತ್ರದಲ್ಲಿ, ಭರತ್ ಬೋಪಣ್ಣ ಅವರು ಲಕ್ಕಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು