ಬೆಂಗಳೂರು: ಕಾಮಿಡಿ ಕಿಲಾಡಿ ಖ್ಯಾತಿಯ ಚಂದ್ರಶೇಖರ್ ಸಿದ್ಧಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ್ದ ಚಂದ್ರಶೇಖರ್ ನಿನ್ನೆ( ಶುಕ್ರವಾರ) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಕಾಮಿಡಿ ಕಿಲಾಡಿ ಮೂಲಕ ಜನಪ್ರಿಯತೆ ಗಳಿಸಿದ್ದ ಚಂದ್ರಶೇಖರ್, ಕೆಲವು ಧಾರಾವಾಹಿ ಸೇರಿದಂತೆ ಸಣ್ಣಪುಟ್ಟ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು. ಮಿಮಿಕ್ರಿ ಕಲಾವಿದ ಸಹ ಆಗಿದ್ದರು.

ಚಿತ್ರರಂಗದಲ್ಲಿ ಅವಕಾಶಗಳು ಸಿಗದ ಕಾರಣ ಮತ್ತೆ ತಮ್ಮ ಊರಿಗೆ ವಾಪಸ್ ಆಗಿದ್ದ ಚಂದ್ರಶೇಖರ್, ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಅವರು, ಚಿಕಿತ್ಸೆಯನ್ನೂ ಪಡೆದಿದ್ದರು. ಚಂದ್ರಶೇಖರ್ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಪತ್ನಿ ಜತೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.