ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ದೂರು

Published 1 ಮೇ 2024, 15:24 IST
Last Updated 1 ಮೇ 2024, 15:24 IST
ಅಕ್ಷರ ಗಾತ್ರ

ಕೊಳ್ಳೇಗಾಲ: ‘ಜಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಮಹಾನಟಿ ರಿಯಾಲಿಟಿ ಶೋನಲ್ಲಿ ಮೆಕಾನಿಕ್ ವೃತ್ತಿ ಮಾಡುವ ಶ್ರಮಿಕ ವರ್ಗಕ್ಕೆ ಅವಮಾನ ಮಾಡಲಾಗಿದೆ’ ಎಂದು ಆರೋಪಿಸಿ ನಗರ ಪೊಲೀಸ್ ಠಾಣೆಯಲ್ಲಿ ಕೊಳ್ಳೇಗಾಲ ಟೌನ್ ದ್ವಿಚಕ್ರ ವಾಹನ ದುರಸ್ಥಿಗಾರರ ಸಂಘದ ಅಧ್ಯಕ್ಷ ಮೊಹಮ್ಮದ್ ಅಸ್ಗರ್ ಬುಧವಾರ ದೂರು ನೀಡಿದ್ದಾರೆ.

‘ಮೆಕಾನಿಕ್‌ ಕೆಲಸ ಮಾಡುವವರು ಕೊಚ್ಚೆ, ಅವರ ಮನೆಯವರು ಗ್ರೀಸ್ ತಿಂದು ಬದುಕುತ್ತಿದ್ದಾರೆ ಎಂದು ಬಿಂಬಿಸಲಾಗಿದೆ. ಒಂದು ಶ್ರಮಿಕ ವರ್ಗವನ್ನು ನಿಂದಿಸಿರುವ ಈ ಕಾರ್ಯಕ್ರಮ ನಡೆಸಿಕೊಡುವ ಮುಖ್ಯಸ್ಥರು, ತೀರ್ಪುಗಾರರಾದ ರಮೇಶ್ ಅರವಿಂದ್, ಪ್ರೇಮಾ, ನಿರೂಪಕಿ ಅನುಶ್ರೀ ಹಾಗೂ ಸ್ಪರ್ಧಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT