ಭಾನುವಾರ, ನವೆಂಬರ್ 1, 2020
20 °C

ಡ್ರಗ್ಸ್ ಪ್ರಕರಣ: ಕಿರುತೆರೆ ನಟ ಅಭಿಷೇಕ್, ನಟಿ ಗೀತಾ ಭಟ್ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Drug mafia

ಬೆಂಗಳೂರು: ಪೆಡ್ಲರ್ ಜೊತೆ ಸಂಪರ್ಕವಿಟ್ಟುಕೊಂಡು ಡ್ರಗ್ಸ್ ಖರೀದಿಸುತ್ತಿದ್ದ ಆರೋಪದಡಿ ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಟ್ ಅವರನ್ನು ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇಬ್ಬರು ಪೆಡ್ಲರ್‌ಗಳನ್ನು ಇತ್ತೀಚೆಗಷ್ಟೇ ಬಂಧಿಸಿದ್ದ ಐಎಸ್‌ಡಿ ಪೊಲೀಸರು, ಅವರ ಹೇಳಿಕೆ ಆಧರಿಸಿ ನಟ ಯೋಗೀಶ್ ಹಾಗೂ ಕ್ರಿಕೆಟಿಗ ಎನ್.ಸಿ.ಅಯ್ಯಪ್ಪ ಅವರನ್ನು ಈಗಾಗಲೇ ವಿಚಾರಣೆ ಮಾಡಿದ್ದಾರೆ.

ಅಭಿಷೇಕ್ ಹಾಗೂ ಗೀತಾ ಭಟ್ ಅವರಿಗೂ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದರು. ಅದರನ್ವಯ ಇಬ್ಬರೂ ಶಾಂತಿನಗರದಲ್ಲಿರುವ ಐಎಸ್‌ಡಿ ಕಚೇರಿಗೆ ವಿಚಾರಣೆಗಾಗಿ ಬಂದಿದ್ದಾರೆ. ಎಸ್ಪಿ ನೇತೃತ್ವದ ತಂಡ, ಅವರಿಬ್ಬರಿಂದ ಹೇಳಿಕೆ ಪಡೆಯುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು