ಸೋಮವಾರ, ಡಿಸೆಂಬರ್ 6, 2021
24 °C

ಡ್ರಗ್ಸ್‌ ಪ್ರಕರಣ: ವಿಚಾರಣೆಗೆ ಹಾಜರಾದ ನಿರೂಪಕಿ ಅನುಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ನೋಟಿಸ್ ಪಡೆದಿರುವ ನಟಿ, ನಿರೂಪಕಿ ಅನುಶ್ರೀ ಶನಿವಾರ ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ವಿಚಾರಣೆಗೆ ಹಾಜರಾಗಲು ಸೆ.29ರ ಮೊದಲು ಹಾಜರಾಗುವಂತೆ ಪೊಲೀಸರು ನೋಟಿಸ್‌ ನೀಡಿದ್ದರು. ಆದರೆ ಅನುಶ್ರೀ ಸೆ.25ರಂದೇ ಹಾಜರಾಗುವುದಾಗಿ ತಿಳಿಸಿದ್ದರು. ಅದರಂತೆ ಪೊಲೀಸರು ಅನುಶ್ರೀ ಶುಕ್ರವಾರ ವಿಚಾರಣೆಗೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ ಸಂಜೆಯವರೆಗೂ ಅನುಶ್ರೀ ವಿಚಾರಣೆಗೆ ಬಂದಿರಲಿಲ್ಲ.

ಬೆಳಿಗ್ಗೆಯೇ ಸಿಸಿಬಿ ಕಚೇರಿಗೆ ಬಂದ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀಯನ್ನು ಪಣಂಬೂರು ಎಸಿಪಿ ಬೆಳ್ಳಿಯಪ್ಪ ನೇತೃತ್ವ ಪಣಂಬೂರು ಸಿಸಿಬಿ ತಂಡ ವಿಚಾರಣೆ ನಡೆಸುತ್ತಿದೆ

ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ನೋಟಿಸ್ ಪಡೆದಿರುವ ನಟಿ, ನಿರೂಪಕಿ ಅನುಶ್ರೀ ಶನಿವಾರ ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ವಿಚಾರಣೆಗೆ ಹಾಜರಾಗಲು ಸೆ.29ರ ಮೊದಲು ಹಾಜರಾಗುವಂತೆ ಪೊಲೀಸರು ನೋಟಿಸ್‌ ನೀಡಿದ್ದರು. ಆದರೆ ಅನುಶ್ರೀ ಸೆ.25ರಂದೇ ಹಾಜರಾಗುವುದಾಗಿ ತಿಳಿಸಿದ್ದರು. ಅದರಂತೆ ಪೊಲೀಸರು ಅನುಶ್ರೀ ಶುಕ್ರವಾರ ವಿಚಾರಣೆಗೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ ಸಂಜೆಯವರೆಗೂ ಅನುಶ್ರೀ ವಿಚಾರಣೆಗೆ ಬಂದಿರಲಿಲ್ಲ.

ಬೆಳಿಗ್ಗೆಯೇ ಸಿಸಿಬಿ ಕಚೇರಿಗೆ ಬಂದ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀಯನ್ನು ಪಣಂಬೂರು ಎಸಿಪಿ ಬೆಳ್ಳಿಯಪ್ಪ ನೇತೃತ್ವ ಪಣಂಬೂರು ಸಿಸಿಬಿ ತಂಡ ವಿಚಾರಣೆ ನಡೆಸುತ್ತಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು