ಶುಕ್ರವಾರ, ಅಕ್ಟೋಬರ್ 23, 2020
24 °C

ಡ್ರಗ್ಸ್ ಜಾಲ : ನಿರೂಪಕಿ ಅನುಶ್ರಿಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ  ನಿರೂಪಕಿ, ನಟಿ ಅನುಶ್ರೀ ಅವರಿಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ಡ್ರಗ್‌ ಮಾಫಿಯಾಕ್ಕೆ ಸಂಬಂಧಿಸಿದಂತೆ ಡ್ಯಾನ್ಸರ್‌ ಕಿಶೋರ್ ಶೆಟ್ಟಿ ಬಂಧಿಸಿರುವ ಮಂಗಳೂರಿನ ಸಿಸಿಬಿ ಪೊಲೀಸರು, ಈ ಪ್ರಕರಣದ ಸಂಬಂಧ ಅನುಶ್ರೀ ಅವರಿಗೆ ವಾಟ್ಸಾಪ್‌ನಲ್ಲಿ ನೋಟಿಸ್‌ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಚಾರಣೆಯ ಸಂದರ್ಭ ಕಿಶೋರ್‌ ಅಮನ್‌ ಶೆಟ್ಟಿ ಅವರ ಆಪ್ತ ಸ್ನೇಹಿತ ತರುಣ್‌ ಅನುಶ್ರೀ ಅವರೊಂದಿಗೆ ಪಾರ್ಟಿ ಮಾಡಿದ್ದ ಎನ್ನುವ ವಿಚಾರವನ್ನು ತಿಳಿಸಿದ್ದು, ಅನುಶ್ರೀ ಅವರಿಗೆ ಸಿಸಿಬಿ ನೋಟಿಸ್‌ ಜಾರಿ ಮಾಡಿದೆ ಎನ್ನಲಾಗಿದೆ.

ಅನುಶ್ರೀ ಅವರಿಗೆ ನೋಟಿಸ್‌ ನೀಡಲು ಸಿಸಿಬಿ ತಂಡ ಬೆಂಗಳೂರಿಗೆ ಹೊರಟಿದೆ ಎಂದು ಹೇಳಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು