ಗುರುವಾರ , ಅಕ್ಟೋಬರ್ 29, 2020
26 °C
ಮೂರುವರೆ ಗಂಟೆ ವಿಚಾರಣೆ ನಡೆಸಿದ ಪೊಲೀಸರು

ಡ್ರಗ್ಸ್ ಪ್ರಕರಣ | ವಿಚಾರಣೆಗೆ ಎಲ್ಲ ರೀತಿಯ ಸಹಕಾರ: ಅನುಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಪಡೆದಿರುವ ಖ್ಯಾತ ನಿರೂಪಕಿ, ನಟಿ ಅನುಶ್ರೀ ಅವರ ವಿಚಾರಣೆ ಮುಕ್ತಾಯವಾಗಿದೆ. ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದಲ್ಲಿ ಸತತ ಮೂರುವರೆ ಗಂಟೆಗಳ ಕಾಲ ವಿಚಾರಣೆ ನಡೆದಿದೆ.

ಬಳಿಕ ಮಾಧ್ಯಮದವರ ಜೊತೆಗಡ ಮಾತನಾಡಿದ ಅನುಶ್ರೀ ಅವರು, ನೋಟಿಸ್‌ ನೀಡಿದ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದು ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಇನ್ನು ಮುಂದೆ ನನ್ನ ವಿಚಾರಣೆಗೆ ಕರೆದರೆ ಯಾವುದೇ ಸಂದರ್ಭದಲ್ಲೂ ಹಾಜರಾಗುತ್ತೇನೆ ಎಂದು ತಿಳಿಸಿದರು.

ತರುಣ್ ರಾಜ್ ನನಗೆ 12 ವರ್ಷಗಳ ಹಿಂದೆ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿದ್ದು, ಆ ವೇಳೆ ಮಾತ್ರ ತರುಣ್ ರಾಜ್ ಪರಿಚಯವಾಗಿದೆ. ಡ್ರಗ್ಸ್ ಬಗ್ಗೆ ತರಣ್ ಜೊತೆ ಯಾವುದೇ ಸಂಬಂಧ ಇಲ್ಲ. ನಾನು ತರುಣ್ ಡ್ಯಾನ್ಸ್‌ ಕ್ಲಾಸ್‌ನ ಉದ್ಘಾಟನಾ ಕಾರ್ಯಕ್ರಮಕ್ಕೆ ಮಂಗಳೂರಿಗೆ ಬಂದಿದ್ದೆ ಎಂದರು.

ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದು ಮತ್ತೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗುತ್ತೇನೆ. ಡ್ರಗ್ ಮಾಫಿಯಾ ರಾಜ್ಯಕ್ಕೆ ಅಂಟಿರುವ ಭೂತ. ಆ ಭೂತವನ್ನು ಹೋಗಲಾಡಿಸಲು ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಸಹಕಾರ ನೀಡಬೇಕು ಎಂದು ಹೇಳಿದರು.

ಡ್ರಗ್ಸ್ ಪಾರ್ಟಿ ವಿಚಾರವಾಗಿ ಉತ್ತರಿಸಿದ ಅವರು, ಪಾರ್ಟಿಯಲ್ಲಿ ಭಾಗಿಯಾಗಿರುವ ವಿಚಾರಕ್ಕೆ ಸಂಬಂಧಿಸಿ ನನ್ನನ್ನು ವಿಚಾರಣೆಗೆ ಕರೆದಿಲ್ಲ. ಅವರು ನನ್ನ ಡ್ಯಾನ್ಸ್‌ ಕೊರಿಯೋಗ್ರಾಫರ್‍ ಆದ ಕಾರಣ ವಿಚಾರಣೆಗೆ ಕರೆದಿದ್ದರು. ಕಿಶೋರ್‌ ಅಮನ್‌ ಶೆಟ್ಟಿ ಹಾಗೂ ತರುಣ್‌ ಇವರಿಬ್ಬರು ಕೂಡಾ 12 ವರ್ಷಗಳ ಹಿಂದೆ ಒಂದು ಕಾರ್ಯಕ್ರಮದಲ್ಲಿ ನನ್ನ ಡ್ಯಾನ್ಸ್‌ ಕೊರಿಯೋಗ್ರಾಫರ್‍ ಆಗಿದ್ದರು ಎಂದು ಹೇಳಿದರು.
ಶನಿವಾರ ಬೆಳಿಗ್ಗೆ ವಿಚಾರಣೆ ಇದ್ದುದರಿಂದ ನಾನು ಶುಕ್ರವಾರ ಬೆಂಗಳೂರಿನಿಂದ ಹೊರಟು ಮಂಗಳೂರಿಗೆ ಬಂದಿದ್ದೆ. ಶನಿವಾರ ವಿಚಾರಣೆಗೆ ಹಾಜರಾಗಿದ್ಧೇನೆ. ಪೊಲೀಸರು ಹೇಳಿದ ಸಮಯಕ್ಕೆ ಹಾಜರಾಗಿದ್ದೇನೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು