ಬುಧವಾರ, ಅಕ್ಟೋಬರ್ 28, 2020
17 °C

ಡ್ರಗ್ಸ್‌ ಪ್ರಕರಣ: ಸಿಸಿಬಿ ವಿಚಾರಣೆಗಾಗಿ ಮಂಗಳೂರಿನತ್ತ ನಿರೂಪಕಿ ಅನುಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬರುವಂತೆ ಸಿಸಿಬಿ ನೋಟಿಸ್ ನೀಡಿದ್ದು, ನಾನು ಹಾಜರಾಗಲು ಮಂಗಳೂರಿಗೆ ಹೋಗುತ್ತಿದ್ದೇನೆ. ಅವರು ವಿಚಾರಣೆಗೆ ಮಾತ್ರ ಕರೆದಿರುವುದು. ಹಾಗಂದ ಮಾತ್ರಕ್ಕೆ ನಾನು ಅಪರಾಧಿಯಲ್ಲ ಎಂದು ನಟಿ, ನಿರೂಪಕಿ ಅನುಶ್ರೀ ಹೇಳಿದ್ದಾರೆ.

ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮಂಗಳೂರು ಪೊಲೀಸರು ಅನುಶ್ರೀಗೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅನುಶ್ರೀ, ಬೆಳಿಗ್ಗೆ 11 ಗಂಟೆಗೆ ಮಂಗಳೂರಿಗೆ ತೆರಳಿ ವಿಚಾರಣೆಗೆ ಹಾಜರಾಗುವುದಾಗಿ ಹೇಳಿಕೊಂಡಿದ್ದಾರೆ.

ಕೇವಲ ವಿಚಾರಣೆಗೆ ಕರೆದಿದ್ದಾರೆ. ಆದರೆ ಕೆಲವು ಮಾಧ್ಯಮಗಳಲ್ಲಿ ನಾನು ನಟಿಸಿದ ದೃಶ್ಯಗಳನ್ನು ತೋರಿಸಿ ನನ್ನನ್ನು ಅಪರಾಧಿ ಎಂಬಂತೆ ಬಿಂಬಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ನನ್ನನ್ನು ವಿಚಾರಣೆಗೆ ಮಾತ್ರ ಕರೆದಿದ್ದಾರೆ. ‌ವಿಚಾರಣೆಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.

ಪಾಂಡೇಶ್ವರ ಠಾಣೆಯಲ್ಲಿ ವಿಚಾರಣೆ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ, ಅನುಶ್ರೀ ಅವರ ವಿಚಾರಣೆಯನ್ನು ಮಂಗಳೂರಿನ ಪಾಂಡೇಶ್ವರದ ನಾರ್ಕೊಟಿಕ್‌‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ನಡೆಸಲು ‌ನಿರ್ಧರಿಸಲಾಗಿದೆ.

ಆರೋಪಿ ಕಿಶೋರ್, ತರುಣ್, ಅಕೀಲ್ ಅವರು ಸದ್ಯ ನಾರ್ಕೊಟಿಕ್ ಠಾಣೆಯಲ್ಲೇ ಇದ್ದು, ಅವರ ಸಮ್ಮುಖದಲ್ಲೇ ಅನುಶ್ರೀ ಅವರ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಅನುಶ್ರೀ ಅವರನ್ನು ಡಿಸಿಪಿ ವಿನಯ್‌‌ ಗಾಂವ್ಕರ್‌ ಅವರು ವಿಚಾರಣೆ ಮಾಡಲಿದ್ದಾರೆ.

ಅನುಶ್ರೀ ಫೇಸ್ಬುಕ್ನಲ್ಲಿ ನೀಡಿರುವ ‌ಪ್ರಕಟಣೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು