ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರ್ಮಿಕ ಭಾವನೆಗೆ ಧಕ್ಕೆ; ‘ತಾಂಡವ್’ ವಿರುದ್ಧ ಎಫ್‌ಐಆರ್

Last Updated 23 ಜನವರಿ 2021, 17:23 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ‘ತಾಂಡವ್’ ವೆಬ್‌ ಸರಣಿ ನಿರ್ಮಾಣ ತಂಡ ಹಾಗೂ ಅದನ್ನು ಪ್ರಸಾರ ಮಾಡಿದ ಅಮೆಜಾನ್ ಪ್ರೈಮ್ ಮುಖ್ಯಸ್ಥರ ವಿರುದ್ಧ ಕೆ.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕಿರಣ ಆರಾಧ್ಯ ಎಂಬುವರು ದೂರು ನೀಡಿದ್ದಾರೆ. ‘ತಾಂಡವ್’ ವೆಬ್‌ ಸರಣಿ ನಿರ್ದೇಶಕ ಅಲಿ ಅಬ್ಬಾಸ್ ಜಾಫರ್, ನಿರ್ಮಾಪಕ ಫರಾನ್ ಅಖ್ತರ್, ನಟರಾದ ಸೈಫ್‌ ಅಲಿ ಖಾನ್, ಮೊಹಮ್ಮದ್ ಜಿಸಾನ್ ಆಯೂಬ್ ಹಾಗೂ ಅಮೆಜಾನ್ ಪ್ರೈಮ್ ಮುಖ್ಯಸ್ಥೆ ಅಪರ್ಣಾ ಪುರೋಹಿತ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವೆಬ್ ಸರಣಿಯ ದೃಶ್ಯವೊಂದರಲ್ಲಿ, ಹಿಂದೂ ಧರ್ಮದ ದೇವರಾದ ಈಶ್ವರನ ಬಾಯಿಯಲ್ಲಿ ಅವಾಚ್ಯ ಸಂಭಾಷಣೆ ಹೇಳಿಸಲಾಗಿದೆ. ಉದ್ದೇಶಪೂರ್ವಕವಾಗಿಯೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT