ಬುಧವಾರ, ಡಿಸೆಂಬರ್ 8, 2021
23 °C

ಜಿಮ್‌ನಲ್ಲಿ ವರ್ಕೌಟ್‌: ಅಭಿಮಾನಿಗಳಿಗೆ ಫಿಟ್ನೆಸ್ ಮಂತ್ರ ವಿವರಿಸಿದ ಗೀತಾ ಭಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಿರುತೆರೆ ನಟಿ ಮತ್ತು ಮಾಜಿ ಬಿಗ್ ಬಾಸ್ ಸ್ಪರ್ಧಿ ಗೀತಾ ಭಾರತಿ ಭಟ್ ಅವರು ದೇಹದ ತೂಕ ಕಡಿಮೆ ಮಾಡಿಕೊಳ್ಳಲು ಜಿಮ್‌ನತ್ತ ಮುಖ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ.
 
ಸದ್ಯ ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವ ವಿಡಿಯೊ ಮತ್ತು ಫೋಟೊಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ‘ಚಿಂತಿಸಬೇಡಿ ಕೋಚ್ ಕಿರಣ್ ಸಾಗರ್‌ ಅವರ ಮಾರ್ಗದರ್ಶನದಲ್ಲಿ ವರ್ಕೌಟ್‌ ಮಾಡುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಗೀತಾ ಭಾರತಿ ಭಟ್‌ ಅವರ ವರ್ಕೌಟ್‌ ಫೋಟೊ ಮತ್ತು ವಿಡಿಯೊಗಳನ್ನು ವೀಕ್ಷಿಸಿರುವ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಜತೆಗೆ ‘ದಿನನಿತ್ಯವೂ ನಿಮ್ಮದೇ ದಾಖಲೆಯನ್ನು ಮುರಿದು ಹಾಕುತ್ತೀರಿ, ಚೆನ್ನಾಗಿದೆ’ ಎಂದು ಬಿಗ್‍ ಬಾಸ್ ಖ್ಯಾತಿಯ ಕೆ.ಪಿ.ಅರವಿಂದ್ ಕಾಮೆಂಟ್ ಮಾಡಿದ್ದಾರೆ.

ಗೀತಾ ಅವರು ‘ಬ್ರಹ್ಮಗಂಟು’ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು