ಮಂಗಳವಾರ, 3 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರದರ್ಶನದ ಖ್ಯಾತ ಸುದ್ದಿ ವಾಚಕಿ ಗೀತಾಂಜಲಿ ಅಯ್ಯರ್ ನಿಧನ

Published 8 ಜೂನ್ 2023, 9:37 IST
Last Updated 8 ಜೂನ್ 2023, 9:37 IST
ಅಕ್ಷರ ಗಾತ್ರ

ನವದೆಹಲಿ: ದೂರದರ್ಶನದ (Doordarshan) ಖ್ಯಾತ ಸುದ್ದಿ ವಾಚಕಿ ಹಾಗೂ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. 

ಗೀತಾಂಜಲಿ ಅವರು ಪಾರ್ಕಿನ್ಸನ್‌ ಕಾಯಿಲೆಯಿಂದ ಬಳಲುತ್ತಿದ್ದರು. ನಿನ್ನೆ ಸಂಜೆ ವಾಯು ವಿಹಾರಕ್ಕೆ ಹೋಗಿದ್ದ ಅವರು ಮನೆಗೆ ಬಂದ ಕೂಡಲೇ ಕುಸಿದು ಬಿದ್ದರು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ನಿಧನರಾದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. 

ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಕಾಲೇಜಿನಿಂದ ಡಿಪ್ಲೊಮಾ ಪಡೆದಿದ್ದ ಅವರು 1971ರಲ್ಲಿ ದೂರದರ್ಶನ ಸೇರಿದರು. ನಾಲ್ಕು ಸಲ ಅತ್ಯುತ್ತಮ ನಿರೂಪಕಿ ಪ್ರಶಸ್ತಿ ಸೇರಿದಂತೆ ಅತ್ಯುತ್ತಮ ಮಹಿಳೆಯರಿಗೆ ನೀಡುತ್ತಿದ್ದ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿಯನ್ನು ಪಡೆದಿದ್ದರು.

ಗೀತಾಂಜಲಿ ಅಯ್ಯರ್‌ ಅವರು 3 ದಶಕಗಳ ಕಾಲ ಸುದ್ದಿ ವಾಚಕಿ, ನಿರೂಪಕಿಯಾಗಿ ಕೆಲಸ ಮಾಡಿದ್ದರು.

’ಭಾರತದ ಅತ್ಯುತ್ತಮ ಸುದ್ದಿ ವಾಚಕರಲ್ಲಿ ಒಬ್ಬರಾದ ಗೀತಾಂಜಲಿ ಅಯ್ಯರ್ ನಿಧನರಾಗಿದ್ದಾರೆ ಅವರ ಕುಟುಂಬಕ್ಕೆ ನನ್ನ ಸಂತಾಪಗಳು‘ ಎಂದು ಪತ್ರಕರ್ತೆ ಶೀಲಾ ಭಟ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT