ಮಂಗಳವಾರ, ಸೆಪ್ಟೆಂಬರ್ 28, 2021
21 °C

ಜೀ ಕನ್ನಡದಲ್ಲಿ ಹೊಸ ರಿಯಾಲಿಟಿ ಶೋ: ಗಣಪನ ಆಗಮನ!

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಲವು ಹಿಟ್ ಚಿತ್ರಗಳನ್ನು ನೀಡಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರು ಕಿರುತೆರೆ ರಿಯಾಲಿಟಿ ಶೋಗಳನ್ನೂ ಸೊಗಸಾಗಿ ನಡೆಸಿಕೊಡುವುದರಲ್ಲಿ ಎತ್ತಿದ ಕೈ. ಅಷ್ಟಕ್ಕೂ ಗಣೇಶ್ ಚಿತ್ರರಂಗ ಪ್ರವೇಶ ಮಾಡಲು ಕಾರಣವೇ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಟೈಮ್ಸ್‘ ಶೋ.

ಆ ನಂತರ ಗಣೇಶ ಅನೇಕ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡು, ಇಂದಿಗೂ ಹೊಸ ಸಿನಿಮಾಗಳಲ್ಲಿ ಲವಲವಿಕೆಯಿಂದ ತೊಡಗಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅವರು ಕಿರುತೆರೆ ರಿಯಾಲಿಟಿ ಶೋಗಳಿಂದ ದೂರ ಇದ್ದರು. ಇದೀಗ ಮತ್ತೊಂದು ಕಿರುತೆರೆ ರಿಯಾಲಿಟಿ ಶೋ ಮೂಲಕ ಪ್ರವೇಶ ಮಾಡುತ್ತಿದ್ದಾರೆ.

ಈ ವಿಷಯವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿರುವ ಅವರು, ‘ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ರಿಯಾಲಿಟಿ ಶೋ ಒಂದನ್ನು ನಡೆಸಿ ಕೊಡಲು ಶೀಘ್ರದಲ್ಲೇ ಬರುತ್ತಿದ್ದೇನೆ’ ಎಂದು ಪ್ರೋಮೊವನ್ನು ಹಂಚಿಕೊಂಡಿದ್ದಾರೆ. ಆದರೆ, ಕಾರ್ಯಕ್ರಮ ಏನು? ಎಂಬುದರ ಬಗ್ಗೆ ಗುಟ್ಟು ಕಾಪಾಡಿಕೊಂಡಿದ್ದಾರೆ.

‘ಬಹಳ ದಿನಗಳ ನಂತರ ಕಿರುತೆರೆಗೆ, Zee ಕನ್ನಡದ ಮೂಲಕ ಒಂದು ಹೊಸ ರಿಯಾಲಿಟಿ ಶೋ ಜೊತೆ ಬರ್ತಿದೀನಿ.
ಶೀಘ್ರದಲ್ಲಿ... ನಿರೀಕ್ಷಿಸಿ’ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಜೀ ವಾಹಿನಿ ‘ಗಣಪನ ಆಗಮನ’ ಎಂದು ಗಣೇಶೋತ್ಸವದ ಹಿನ್ನೆಲೆಯಲ್ಲಿ ಸಕತ್ ಪ್ರೋಮೊ ಬಿಡುಗಡೆ ಮಾಡಿದೆ.

 

ವೀಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಜೀ ಕನ್ನಡ ರಿಯಾಲಿಟಿ ಶೋಗಳ ಪಾಲಿಗೆ ಗಣೇಶ್ ಅವರ ಹೊಸ ಶೋ ಸೇರಿಕೊಳ್ಳುತ್ತಾ ಎಂಬುದನ್ನು ಕಾಯ್ದು ನೋಡಬೇಕಿದೆ.

ಇದನ್ನೂ ಓದಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ನಟ ಸಾಯಿ ಧರ್ಮ ತೇಜ್ ಪರಿಸ್ಥಿತಿ ಸದ್ಯ ಸ್ಥಿರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು