ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BBK 10: ಬಿಕ್ಕಿ ಬಿಕ್ಕಿ ಅತ್ತ ಸಂಗೀತಾ, ಬಿಗ್‌ಬಾಸ್ ಮನೆಯಿಂದ ಹೊರಕ್ಕೆ?

Published 22 ನವೆಂಬರ್ 2023, 6:18 IST
Last Updated 22 ನವೆಂಬರ್ 2023, 6:18 IST
ಅಕ್ಷರ ಗಾತ್ರ

ಬೆಂಗಳೂರು: ಸ್ನೇಹಿತರಿಂದ ದೂರವಾಗಿ ವಿನಯ್ ತಂಡ ಸೇರಿಕೊಂಡಿದ್ದ ಸಂಗೀತಾ, ಕಾರ್ತಿಕ್‌ ತಲೆ ಬೋಳಿಸಿಕೊಳ್ಳುವ ಸವಾಲ್‌ ಕೂಡ ಹಾಕಿದ್ದರು. ಹಾಗೆಯೇ ತನಿಷಾ ಮೆಣಸಿನಕಾಯಿ ತಿನ್ನುವುದಕ್ಕೆ ಕಾರಣರಾಗಿದ್ದರು.

ಸ್ನೇಹಿತರ ನೋವಿಗೆ ಕಾರಣರಾದ ಬಗ್ಗೆ ಅವರಲ್ಲಿ ಪಶ್ಚಾತ್ತಾಪ ಹುಟ್ಟಿದೆಯಾ? ಅದೇ ಅವರು ಮನೆಯಿಂದ ಹೊರಬರಲೂ ಕಾರಣವಾಯ್ತಾ? ಇಂಥದ್ದೊಂದು ಅನುಮಾನ ಮೂಡಿದೆ.

‘ನಾನು ನಾನಲ್ಲದ ಬೇರೆ ಯಾರೋ ಆಗ್ತಿದೀನಿ ಅನಿಸ್ತಿದೆ’ ಎಂದು ಸಂಗೀತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತಲೆಯೊಳಗೆ ಒತ್ತಡ ಜಾಸ್ತಿ ಆಗ್ತಿದೆ ಎಂದು ಬೇಸರ ಹೊರಹಾಕಿದ್ದಾರೆ. ಈ ವೇಳೆ ಸಂಗೀತಾರನ್ನು ಸಮಾಧಾನ ಮಾಡಲು ಬಂದ ಕಾರ್ತಿಕ್‌ಗೆ ಕೈ ಮುಗಿದಿದ್ದಾರೆ.

ಹಾಗೆಯೇ, ‘ನಿಮಗೆ ಬೇಕಾದಾಗ ಜಗಳ ಆಡ್ತೀರಾ. ಬೇಕಾದಾಗ ಸಮಾಧಾನ ಮಾಡ್ತೀರಾ?’ ಎಂದು ಕಾರ್ತಿಕ್ ವಿರುದ್ಧ ಗುಡುಗಿದ್ದಾರೆ. ಅದನ್ನು ಕೇಳಿ ಸಂಗೀತಾ ಬಳಿಯಿಂದ ಕಾರ್ತಿಕ್ ಎದ್ದು ಹೋಗಿದ್ದಾರೆ.

‘ನನಗೆ ಈ ಗೇಮ್ ಆಡಲು ಇಷ್ಟವಿಲ್ಲ’ ಎಂದು ಸಂಗೀತಾ ಬಿಗ್‌ಬಾಸ್ ಬಳಿಯಲ್ಲಿ ಬಿಕ್ಕಿ ಬಿಕ್ಕಿ ವಿನಂತಿಸಿಕೊಂಡಿದ್ದಾರೆ. ಅದರ ಬೆನ್ನಿಗೇ ಮನೆಯ ಮುಖ್ಯದ್ವಾರ ತೆರೆದುಕೊಂಡಿರುವ ದೃಶ್ಯವೂ ಪ್ರೋಮೊದಲ್ಲಿದೆ. ಹಾಗಾದರೆ ಸಂಗೀತಾ ಮನೆಯಿಂದ ಹೊರಗೆ ಹೋದರಾ? ಅಥವಾ ಒಳಗೇ ಉಳಿದುಕೊಳ್ಳುತ್ತಾರಾ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಬಿಗ್‌ಬಾಸ್‌ ಕನ್ನಡ 24 ಗಂಟೆ ನೇರಪ್ರಸಾರವನ್ನು Jio Cinemaದಲ್ಲಿ ಉಚಿತವಾಗಿ ನೋಡಬಹುದು. ಪ್ರತಿದಿನದ ಎಪಿಸೋಡ್‌ಗಳನ್ನು Colors Kannadaದಲ್ಲಿ ರಾತ್ರಿ 9.30ಕ್ಕೆ ಪ್ರಸಾರವಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT