ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಗ್ನಿಸಾಕ್ಷಿ ಧಾರಾವಾಹಿ ನಟ ಸಂಪತ್ ಜಯರಾಮ್ ಆತ್ಮಹತ್ಯೆ

Published 23 ಏಪ್ರಿಲ್ 2023, 5:58 IST
Last Updated 23 ಏಪ್ರಿಲ್ 2023, 5:58 IST
ಅಕ್ಷರ ಗಾತ್ರ

ಬೆಂಗಳೂರು: ಅಗ್ನಿ ಸಾಕ್ಷಿ ಧಾರಾವಾಹಿಯ ನಟ ಸಂಪತ್ ಜಯರಾಮ್ (35) ಅವರು ಮೃತಪಟ್ಟಿದ್ದಾರೆ.

ಸಂಪತ್ ಜಯರಾಮ್ ಅವರು ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸಂಪತ್ ಅವರು ಕಿರುತೆರೆಯಷ್ಟೇ ಅಲ್ಲದೆ ಬೆಳ್ಳಿತೆರೆಯಲ್ಲೂ ಮಿಂಚಿದ್ದರು. ಇತ್ತೀಚೆಗೆ ಬಿಡುಗಡೆಯಾಗಿದ್ದ ರಾಜೇಶ್ ಧ್ರುವ ನಿರ್ದೇಶಿಸಿದ್ದ ‘ಶ್ರೀ ಬಾಲಾಜಿ ಫೋಟೊ ಸ್ಟುಡಿಯೋ’ ಸಿನಿಮಾದಲ್ಲಿ ನಟಿಸಿದ್ದರು.

ಸಂಪತ್ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಂಪತ್​ ಜಯರಾಮ್​ ನಿಧನಕ್ಕೆ ನಟ ರಾಜೇಶ್​ ಧ್ರುವ ಅವರು ಸಂತಾಪ ಸೂಚಿಸಿದ್ದಾರೆ. ‘ನಿನ್ನ ಅಗಲಿಕೆ ತಡ್ಕೊಳೋ ಶಕ್ತಿ ನಮಗಿಲ್ಲ ಮಗ. ಅದೆಷ್ಟೋ ಸಿನಿಮಾ ಮಾಡೋದಿದೆ. ಅದೆಷ್ಟೋ ಜಗಳ ಬಾಕಿ ಇದೆ. ಕಂಡ ಕನಸು ನನಸು ಮಾಡ್ಕೋಳೋಕೆ ಇನ್ನೂ ಸಾಕಷ್ಟು ಸಮಯ ಇದೆ. ಇನ್ನೂ ನಿನ್ನ ದೊಡ್ಡ ದೊಡ್ಡ ಸ್ಟೇಜ್​ನಲ್ಲಿ ನೋಡೋದು ಇದೆ ಕಣೋ. ವಾಪಾಸ್ ಬಾರೋ ಪ್ಲೀಸ್’ ಎಂದು ಫೇಸ್‌ಬುಕ್‌ನಲ್ಲಿ ಫೋಸ್ಟ್​ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT