ಚಂದನವನದ ತಾರಾ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ. ಬಹುನಿರೀಕ್ಷಿತ ‘ಮಾರ್ಕ್’ ಚಿತ್ರದ ಮೊದಲ ಟೀಸರ್ ಈ ವಾರಾಂತ್ಯದಲ್ಲಿ ಬಿಡುಗಡೆ ಆಗಲಿದೆ ಎಂದು ನಟ ಸುದೀಪ್ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ನಟ ಸುದೀಪ್ ‘ಮಾರ್ಕ್’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ಮಾರ್ಕ್ 1ನೇ ಟೀಸರ್ ಈ ವಾರಾಂತ್ಯದಲ್ಲಿ’ ಎಂದು ಬರೆದುಕೊಂಡಿದ್ದಾರೆ.
.MARK ಮೊದಲ ಹಾಡು ರಿಲೀಸ್: 'ಸೈಕ್ ಸೈತಾನ್' ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್. ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್.
ನಟ ಸುದೀಪ್ ನಟನೆಯ 47ನೇ ಸಿನಿಮಾ ಇದಾಗಿದ್ದು, ಡಿಸೆಂಬರ್ 25ಕ್ಕೆ ತೆರೆಕಾಣಲಿದೆ. ಸುದೀಪ್ ಜನ್ಮದಿನದ ಹೊಸ್ತಿಲಲ್ಲಿ (ಸೆ.1) ಚಿತ್ರದ ಫಸ್ಟ್ಲುಕ್ ಟೀಸರ್ ಹಾಗೂ ಶೀರ್ಷಿಕೆಯನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ‘ಮಾರ್ಕ್’ ಸಿನಿಮಾದಲ್ಲಿ ಅಜಯ್ ಮಾರ್ಕಂಡೆ ಎಂಬ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ.

‘ಮ್ಯಾಕ್ಸ್’ ಚಿತ್ರದ ನಿರ್ದೇಶಕ ವಿಜಯ್ ಕಾರ್ತಿಕೇಯ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾವನ್ನು ‘ಸತ್ಯಜ್ಯೋತಿ ಫಿಲ್ಮ್ಸ್’ ನಿರ್ಮಾಣ ಮಾಡುತ್ತಿದೆ. ಇತ್ತೀಚೆಗೆ ಮಾರ್ಕ್ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿತ್ತು. 'ಸೈಕ್ ಸೈತಾನ್' ಮಾಸ್ ಗೀತೆಯಲ್ಲಿ ಕಿಚ್ಚ ಸುದೀಪ್ ಭರ್ಜರಿಯಾಗಿ ಕುಣಿದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.