200 ಕಿ.ಮೀ ವೇಗದಲ್ಲಿ ಕಾರು ಚಾಲನೆ ಮಾಡಿದ ಅರವಿಂದ್– ದಿವ್ಯಾ ಜೋಡಿ

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಕೆ.ಪಿ. ಅರವಿಂದ್ - ದಿವ್ಯಾ ಉರುಡುಗ ಒಟ್ಟಿಗೆ ಕಾರ್ ಡ್ರೈವ್ ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.
ಕೆ.ಪಿ ಅರವಿಂದ್ ಅವರು ಗಂಟೆಗೆ 200 ಕಿ.ಮೀ ವೇಗದಲ್ಲಿ ಕಾರು ಚಲಾಯಿಸಿದ್ದಾರೆ. ಈ ಕುರಿತಾದ ಫೋಟೊವೊಂದನ್ನು ದಿವ್ಯಾ ಉರುಡುಗ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
‘ಗಂಟೆಗೆ ಸರಾಸರಿ 200 ಕಿ.ಮೀ ವೇಗದಲ್ಲಿ ಚಲಿಸುವ ಕಾರಿನಲ್ಲಿ ನಾನು ಎಂದಿಗೂ ಕುಳಿತಿರಲಿಲ್ಲ. ಈ ನ್ಯಾಷನಲ್ ರೆಕಾರ್ಡ್‍ನಲ್ಲಿ ಭಾಗಿಯಾಗಿರುವುದು ಹೆಚ್ಚು ಖುಷಿ ನೀಡಿದೆ’ ಎಂದು ದಿವ್ಯಾ ಬರೆದುಕೊಂಡಿದ್ದಾರೆ. ಇದಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.