ಮಂಡ್ಯ:‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ರಿಯಾಲಿಟಿ ಷೋ ವಿಜೇತೆ, ಮಾಡೆಲ್ ಮೆಬಿನಾ ಮೈಕೆಲ್ (22) ಮಂಗಳವಾರ ಸಂಜೆ ಬೆಳ್ಳೂರು ಕ್ರಾಸ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೇವಿಹಳ್ಳಿ ತಿರುವಿನಲ್ಲಿ ಟ್ರ್ಯಾಕ್ಟರ್ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಮೆಬಿನಾ ತನ್ನ ಸ್ನೇಹಿತ ರಾಜು ಜೊತೆ ದೊಡ್ಡಬಳ್ಳಾಪುರದಿಂದ ಮಡಿಕೇರಿಗೆ ಇಟಿಯಸ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಎದುರಿಗೆ ಬರುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ತೀವ್ರವಾಗಿ ಗಾಯಗೊಂಡಿದ್ದ ಮೆಬಿನಾ ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಾರು ಚಾಲಕ ವಿನೋದ್, ರಾಜು ಬೆಂಗಳೂರಿನ ಜಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ.

‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’4ನೇ ಆವೃತ್ತಿಯಲ್ಲಿ ಮೆಬಿನಾ ಗೆಲುವು ಸಾಧಿಸಿದ್ದರು. ನಂತರ ಅವರು ಮಾಡೆಲಿಂಗ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.

ಬೆಳ್ಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಿಂದನುಜ್ಜುಗುಜ್ಜಾಗಿರುವಕಾರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.