ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಮೃತಧಾರೆ ಧಾರಾವಾಹಿಯಲ್ಲಿ ನಟಿಸುತ್ತಿರುವ ನಟಿ ಮೇಘಾ ಶೆಣೈ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ADVERTISEMENT
ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ತಂಗಿ ಸುಧಾ ಪಾತ್ರದಲ್ಲಿ ನಟಿ ಮೇಘಾ ಶೆಣೈ ಅಭಿನಯಿಸುತ್ತಿದ್ದಾರೆ. ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಮೇಘಾ ಜನಪ್ರಿಯತೆ ಪಡೆದಿರೋದು ಅಮೃತಧಾರೆಯ ಸುಧಾ ಪಾತ್ರದ ಮೂಲಕ.
ಚಿತ್ರ: ಇನ್‌ಸ್ಟಾಗ್ರಾಮ್
ಈಗಾಗಲೇ ಧಾರಾವಾಹಿಯಲ್ಲಿ ಸುಧಾ-ಸೃಜನ್ ಜೋಡಿಯನ್ನು ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಸದ್ಯ ನಿಜ ಜೀವನದಲ್ಲಿ ನಟಿ ಮೇಘಾ ಅವರು ಭರತ್ ಸಿಂಗ್ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ಮದುವೆಯ ವಿಡಿಯೊವನ್ನು ನಟಿ ಮೇಘಾ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದೇ ವಿಡಿಯೊ ನೋಡಿದ ಅಭಿಮಾನಿಗಳು, ಸ್ನೇಹಿತರು ನವ ಜೋಡಿಗೆ ಶುಭ ಹಾರೈಸಿದ್ದಾರೆ.