ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ನಟಿಸುತ್ತಿರುವ ದುರ್ಗಾ ಪಾತ್ರಧಾರಿ ಸ್ಟೈಲಿಶ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ADVERTISEMENT
‘ನಾ ನಿನ್ನ ಬಿಡಲಾರೆ’ಯಲ್ಲಿ ದುರ್ಗಾ ಪಾತ್ರದಲ್ಲಿ ನಟಿಸುತ್ತಿರುವ ನಟಿಯ ಹೆಸರು ರಿಷಿಕಾ. ಇವರು ಶಿವಮೊಗ್ಗ ಮೂಲದವರಾಗಿದ್ದು ಬೆಂಗಳೂರಿನಲ್ಲಿ ನೆಲೆಸಿದ್ದು, ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
‘ಕನ್ಯಾಕುಮಾರಿ’ ಹಾಗೂ ‘ಕನ್ಯಾದಾನ’ ಧಾರಾವಾಹಿಗಳಲ್ಲಿ ನಟಿಸಿದ್ದ ರಿಷಿಕಾ ಅವರು ನಾ ನಿನ್ನ ಬಿಡಲಾರೆಯಲ್ಲಿ ಪ್ರಮುಖ ಪಾತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ನಟಿ ರಿಷಿಕಾ ಅವರ ಅಭಿನಯ ವೀಕ್ಷಕರ ಮನ ಗೆದ್ದಿದೆ. ಸದ್ಯ ನಟಿ ಹೊಸ ಲುಕ್‌ನಲ್ಲಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಅದೇ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಕೆಂಪು ಬಣ್ಣದ ಲಾಂಗ್ ಗೌನ್‌ನಲ್ಲಿ ನಟಿ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಇದೇ ಫೋಟೊಗಳನ್ನು ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಇನ್‌ಸ್ಟಾಗ್ರಾಂನಲ್ಲಿ ನಟಿ ರಿಷಿಕಾ ಅವರು 1 ಲಕ್ಷ 16 ಸಾವಿರ ಅನುಯಾಯಿಗಳನ್ನು ಹೊಂದಿದ್ದಾರೆ.