ಕನ್ನಡ ಕಿರುತೆರೆ ನಟಿ, ಬಿಗ್ಬಾಸ್ ಮಾಜಿ ಸ್ಪರ್ಧಿ ನಮ್ರತಾ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಲ ಕಿಡಿಗೇಡಿಗಳು ಕೆಟ್ಟ ಕಾಮೆಂಟ್ಸ್ ಹಾಕಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾಗಿಣಿ ಧಾರಾವಾಹಿ ಮೂಲಕ ನಟಿ ನಮ್ರತಾ ಗೌಡ ಜನಪ್ರಿಯತೆ ಪಡೆದುಕೊಂಡಿದ್ದರು. ಇದಾದ ಬಳಿಕ ಬಿಗ್ಬಾಸ್ ಮನೆಗೂ ಕಾಲಿಟ್ಟರು. ಕೊಂಚ ವಿರಾಮದ ನಂತರ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕರ್ಣ ಧಾರಾವಾಹಿಯಲ್ಲಿ ನಿತ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಆದರೆ, ಈ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ಕೆಲ ಕಿಡಿಗೇಡಿಗಳು ನಮ್ರತಾ ಗೌಡ ಹಾಗೂ ಅವರ ತಾಯಿಗೆ ಕೆಟ್ಟ ಕಾಮೆಂಟ್ಸ್ ಹಾಕಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಸ್ಕ್ರೀನ್ ಶಾಟ್ಗಳನ್ನು ಹಂಚಿಕೊಳ್ಳುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ನಮ್ರತಾ ಗೌಡ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಏನಿದೆ?

‘ಅಶ್ಲೀಲವಾಗಿ ಕಾಮೆಂಟ್ ಮಾಡಿದವರ ಕೆಲ ಸ್ಕ್ರೀನ್ ಶಾಟ್ಗಳನ್ನು ನಟಿ ನಮ್ರತಾ ಗೌಡ ಹಂಚಿಕೊಂಡಿದ್ದಾರೆ. ಇನ್ನೂ ಹೆಚ್ಚು ಜನರನ್ನು ಬಯಲಿಗೆ ತರಲಿದ್ದೇನೆ. ಧಾರಾವಾಹಿಯ ಕಥೆ ಇಷ್ಟವಾಗಿಲ್ಲ ಅಂದಿದ್ದಕ್ಕೆ ಒಬ್ಬರ ತೇಜೋವಧೆ ಮಾಡುವುದು ತಾಯಿಯ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಖಂಡಿತ ಸರಿಯಲ್ಲ. ಅಂಥವರಿಗೆ ನಾಚಿಕೆಯಾಗಬೇಕು’ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು, ಕರ್ಣ ಧಾರಾವಾಹಿಯಲ್ಲಿ ಡಾ. ಕರ್ಣ ನಿತ್ಯಾಗೆ ತಾಳಿ ಕಟ್ಟಿದ್ದಾನೆ. ಮೊದಲು ಕರ್ಣ ಹಾಗೂ ನಿಧಿ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು. ಇನ್ನೇನು ಈ ಇಬ್ಬರ ಪ್ರೀತಿ ವಿಚಾರ ಮನೆಯವರಿಗೆ ಗೊತ್ತಾಗಬೇಕು ಅನ್ನುವಷ್ಟರಲ್ಲಿ ಕರ್ಣ ಧಾರಾವಾಹಿ ಕಥೆಯಲ್ಲಿ ದೊಡ್ಡ ತಿರುವು ಎದುರಾಗಿದೆ.

ಆದರೆ, ಈ ಹೊಸ ಟ್ವಿಸ್ಟ್ ಸಾಕಷ್ಟು ವೀಕ್ಷಕರಿಗೆ ಇಷ್ಟವಾಗಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ನಮ್ರತಾ ಗೌಡ ಹಾಗೂ ಅವರ ತಾಯಿ ಬಗ್ಗೆ ಹಲವರು ಕೆಟ್ಟದಾಗಿ ಕಾಮೆಂಟ್ಸ್ ಹಾಕಿದ್ದಾರೆ. ಅಷ್ಟೇ ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಹೀಗಾಗಿ ಕೆಟ್ಟ ಕಾಮೆಂಟ್ಸ್ ಹಾಕಿದವರ ವಿರುದ್ಧ ನಟಿ ನಮ್ರತಾ ಗೌಡ ಕಿಡಿ ಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.