ಭಾನುವಾರ, ಜೂನ್ 26, 2022
22 °C

2 ಲಕ್ಷಕ್ಕೂ ಅಧಿಕ ಬಳಕೆದಾರರನ್ನು ಕಳೆದುಕೊಂಡ ನೆಟ್‌ಫ್ಲಿಕ್ಸ್

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನೆಟ್‌ಫ್ಲಿಕ್ಸ್ ಬಳಕೆದಾರರ ಸಂಖ್ಯೆಯಲ್ಲಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 2 ಲಕ್ಷ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಜತೆಗೆ ಕಂಪನಿ ಷೇರು ಮೌಲ್ಯ ಕೂಡ ಶೇ 25ರಷ್ಟು ಇಳಿಕೆಯಾಗಿದೆ.

ಜಾಗತಿಕ ಹಣದುಬ್ಬರ, ರಷ್ಯಾದಲ್ಲಿ ಸೇವೆ ಸ್ಥಗಿತದಿಂದ ಗ್ರಾಹಕರ ಸಂಖ್ಯೆ ಇಳಿಕೆ ಹಾಗೂ ಜಾಹೀರಾತು ಸಹಿತ ಕಡಿಮೆ ವೆಚ್ಚದ ಪ್ಲ್ಯಾನ್ ಜತೆಗೆ ಪಾಸ್‌ವರ್ಡ್ ಹಂಚಿಕೊಳ್ಳಲು ನಿರ್ಬಂಧ ವಿಧಿಸಲು ಮುಂದಾಗಿರುವುದು ಕೂಡ ಬಳಕೆದಾರರ ಸಂಖ್ಯೆ ಇಳಿಕೆಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

ಜನವರಿಯಿಂದ ಮಾರ್ಚ್‌ವರೆಗೆ ಒಟ್ಟಾರೆ 2 ಲಕ್ಷ ಬಳಕೆದಾರರನ್ನು ಕಳೆದುಕೊಂಡಿರುವ ನೆಟ್‌ಫ್ಲಿಕ್ಸ್, ಮುಂದಿನ ತ್ರೈಮಾಸಿಕದಲ್ಲಿ ಮತ್ತಷ್ಟು ಗ್ರಾಹಕರನ್ನು ಕಳೆದುಕೊಳ್ಳುವ ಆತಂಕ ವ್ಯಕ್ತಪಡಿಸಿದೆ.

ಜತೆಗೆ ಪ್ರತಿಸ್ಪರ್ಧಿ ಕಂಪನಿಗಳ ವಿವಿಧ ಪ್ಲ್ಯಾನ್‌ಗಳತ್ತ ಗ್ರಾಹಕರು ಆಕರ್ಷಿತರಾಗಿರುವುದು ಕೂಡ ಇದಕ್ಕೆ ಕಾರಣ ಎನ್ನಲಾಗಿದ್ದು, ಮುಂದೆ ಜಾಹೀರಾತು ಸಹಿತ ಕಡಿಮೆ ವೆಚ್ಚದ ಪ್ಯಾಕೇಜ್ ಒದಗಿಸುವುದು ಹಾಗೂ ಪಾಸ್‌ವರ್ಡ್ ಹಂಚಿಕೊಂಡರೆ ಹೆಚ್ಚುವರಿ ಶುಲ್ಕ ವಿಧಿಸುವ ಬಗ್ಗೆ ಚಿಂತನೆ ನಡೆಸಿರುವುದು ಕೂಡ ನೆಟ್‌ಫ್ಲಿಕ್ಸ್ ಬಳಕೆದಾರರ ಸಂಖ್ಯೆ ಕುಸಿತಕ್ಕೆ ಕಾರಣ ಎಂದು ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು