ನಟಿ ತುನಿಷಾ ಶರ್ಮಾ ಉಸಿರುಗಟ್ಟಿ ಸಾವು: ಮರಣೋತ್ತರ ಪರೀಕ್ಷೆ ವರದಿ

ಮುಂಬೈ: ಹಿಂದಿ ಧಾರಾವಾಹಿ ನಟಿ ತುನಿಷಾ ಶರ್ಮಾ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ಹೇಳಿದೆ.
ಪಾಲ್ಘರ್ ಜಿಲ್ಲೆಯ ವಸಾಯಿ ಪ್ರದೇಶದಲ್ಲಿ ಹಾಕಲಾಗಿದ್ದ ತಮ್ಮ ಧಾರಾವಾಹಿವೊಂದರ ಶೂಟಿಂಗ್ ಸೆಟ್‌ನಲ್ಲೇ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.
ಆಕೆ ಗರ್ಭಿಣಿಯಾಗಿದ್ದರು ಎಂಬ ವದಂತಿ ಹಬ್ಬಿತ್ತು. ಆಕೆ ಗರ್ಭಿಣಿಯಾಗಿರಲಿಲ್ಲ. ನೇಣು ಬಿಗಿದುಕೊಂಡು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಖಚಿತವಾಗಿದೆ.
ಸಹ ನಟ ಮತ್ತು ಆಕೆಯ ಮಾಜಿ ಪ್ರಿಯಕರ ಶೀಜಾನ್ ಮಹಮ್ಮದ್ ಖಾನ್ ಅವರ ಮೇಕಪ್ ಕೋಣೆಯಲ್ಲಿ ಡಿ.24ರಂದು ನೇಣು ಬಿಗಿದ ಸ್ಥಿತಿಯಲ್ಲಿ ಶರ್ಮಾ ದೇಹ ಪತ್ತೆಯಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಶೀಜಾನ್ ಅವರನ್ನು ಬಂಧಿಸಿದ್ದಾರೆ. ತುನಿಷಾ ಸಾವಿಗೆ ಶೀಜಾನ್ ಕಾರಣ ಎಂದು ಆಕೆಯ ತಾಯಿ ದೂರು ದಾಖಲಿಸಿದ್ದರು.
ನಗರದ ಜೆಜೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ದೇಹದಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.