ಭೋಪಾಲ್: ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ (29) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ರಾಹುಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ವೈಶಾಲಿ ಠಕ್ಕರ್ ಅವರು ಸೋಮವಾರ ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದರು. ಘಟನೆ ನಡೆದ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿತ್ತು.
ಮಾಜಿ ಗೆಳೆಯನಿಂದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವೈಶಾಲಿ, ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು. ಡೆತ್‌ನೋಟ್ ಆಧರಿಸಿ ತನಿಖೆ ನಡೆಸಿದ ತೇಜಾಜಿ ನಗರ ಪೊಲೀಸರು ರಾಹುಲ್‌ನನ್ನು ವಶಕ್ಕೆ ಪಡೆದಿದ್ದಾರೆ.
‘ಯೇ ರಿಷ್ತಾ ಕ್ಯಾ ಕೆಹಲಾತಾ ಹೈ’ ಧಾರಾವಾಹಿ ಮೂಲಕ ವೃತ್ತಿಜೀವನ ಆರಂಭಿಸಿದ ವೈಶಾಲಿ ಅವರಿಗೆ ‘ಸಸುರಾಲ್ ಸಿಮರ್ ಕಾ’ ಧಾರಾವಾಹಿ ಸಾಕಷ್ಟು ಖ್ಯಾತಿ ನೀಡಿತ್ತು. , ‘ಸೂಪರ್ ಸಿಸ್ಟರ್ಸ್’, ‘ಮನಮೋಹಿನಿ 2’ ಸೇರಿ 12ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.