ಸೋಮವಾರ, ಡಿಸೆಂಬರ್ 6, 2021
24 °C

ಬಿಗ್ ಬಾಸ್ ಸೀಸನ್ 15: ವೈಲ್ಡ್ ಕಾರ್ಡ್ ಪ್ರವೇಶ ಪಡೆದ ರಾಖಿ ಸಾವಂತ್!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Rakhi Sawant Instagram Post

ಬೆಂಗಳೂರು: ಹಲವು ಬಾರಿ ವಿವಾದಗಳಿಂದಲೇ ಸುದ್ದಿಯಾಗಿರುವ ನಟಿ ರಾಖಿ ಸಾವಂತ್, ಈ ಬಾರಿ ಬಿಗ್ ಬಾಸ್ ಸೀಸನ್ 15 ಹಿಂದಿ ಆವೃತ್ತಿಗೆ ತೆರಳುವ ಮೂಲಕ ಸುದ್ದಿಯಾಗಿದ್ದಾರೆ.

ವೈಲ್ಡ್ ಕಾರ್ಡ್ ಪ್ರವೇಶ ಪಡೆದಿರುವ ರಾಖಿ ಸಾವಂತ್, ನಾನು ಈ ಬಗ್ಗೆ ಯಾವುದೇ ಪ್ಲ್ಯಾನ್ ಹೊಂದಿಲ್ಲ. ಆದರೆ ಮನೆಯಲ್ಲಿರುವ ಎಲ್ಲರಿಗೂ ಸೂಕ್ತ ಸಂದರ್ಭದಲ್ಲಿ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.

ಜತೆಗೆ ರಾಖಿ ಸಾವಂತ್ ಅವರ ಪತಿ ರಿತೇಶ್ ಕೂಡ ಬಿಗ್ ಬಾಸ್ ಶೋದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಿತೇಶ್ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಕಡಿಮೆಯಾಗಿದೆ. ಹೀಗಾಗಿ ಬಿಗ್‌ ಬಾಸ್‌ನಲ್ಲಿ ಅವರು ಬರುತ್ತಿರುವುದು ಹೆಚ್ಚಿನ ಚರ್ಚೆಗೆ ಗ್ರಾಸವಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಈಗಾಗಲೇ ಕಠಿಣ ಸ್ಪರ್ಧೆ ಏರ್ಪಟ್ಟಿದ್ದು, ರಾಖಿ ಅವರು ಯಾವ ರೀತಿಯಲ್ಲಿ ಬಿಗ್ ಬಾಸ್ ಗೆಲ್ಲಲು ಯೋಜನೆ ರೂಪಿಸಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು