ಶುಕ್ರವಾರ, ಫೆಬ್ರವರಿ 26, 2021
27 °C

ಆರೋಗ್ಯವಾಗಿದ್ದಾರೆ ರಾಮಾಯಣದ 'ರಾವಣ' ಅರವಿಂದ ತ್ರಿವೇದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜನಪ್ರಿಯ ರಾಮಾಯಣ ಧಾರಾವಾಹಿಯ ರಾವಣ ಪಾತ್ರದಾರಿ ಅರವಿಂದ ತ್ರಿವೇದಿ ಆರೋಗ್ಯವಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ಖಚಿತಪಡಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ರಾವಣ ಪಾತ್ರದಾರಿ ಅರವಿಂದ ತ್ರಿವೇದಿ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿಗಳು ಹರಿದಾಡಿದ್ದವು. ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿರುವ ಅರವಿಂದ ತ್ರಿವೇದಿ ಕುಟುಂಬದವರು, ಅವರು ಆರೋಗ್ಯವಾಗಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ದೂರದರ್ಶನದಲ್ಲಿ ರಾಮಾಯಣ ಧಾರಾವಾಹಿ ಮರು ಪ್ರಸಾರವಾದ ಬಳಿಕ ಅವರವಿಂದ್‌ ತ್ರಿವೇದಿ ಟ್ವಿಟರ್ ಖಾತೆ  ತೆರೆದಿದ್ದಾರೆ. ಸುಳ್ಳು ಸುದ್ದಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು 'ಯಾರೊಬ್ಬರ ಸಾವಿನ ಬಗ್ಗೆ ನಿಖರವಾಗಿ ಪರಿಶೀಲಿಸದೇ ಸುದ್ದಿ ಹರಡುವುದು ತಪ್ಪು. ಈ ಬಗ್ಗೆ ಕ್ಷಮೆಯಾಚಿಸಿ, ಆ ಟ್ವೀಟ್‌ ಅನ್ನು ಅಳಿಸಿ ಹಾಕಿ' ಎಂದು ಟ್ವೀಟ್‌ ಮಾಡಿದ್ದಾರೆ.

ಲಾಕ್‌ಡೌನ್‌ ಪರಿಣಾಮ ರಾಮಾಯಣ ಧಾರಾವಾಹಿಯನ್ನು ದೂರದರ್ಶನದಲ್ಲಿ ಮರು ಪ್ರಸಾರ ಮಾಡಲಾಗಿತ್ತು. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಸಾಕಷ್ಟು ಜನಪ್ರಿಯತೆ ಪಡೆದಿದೆ. ನೋಡುಗರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು