ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಪಘಾತ: ‘ರಿಯಾಲಿಟಿ ಶೋ’ ಸ್ಪರ್ಧಿಯಾಗಿದ್ದ ಸಮನ್ವಿ ಸಾವು, ಆಕೆಯ ತಾಯಿಗೆ ಗಾಯ

Last Updated 13 ಜನವರಿ 2022, 16:33 IST
ಅಕ್ಷರ ಗಾತ್ರ

ಬೆಂಗಳೂರು: ಕೋಣನಕುಂಟೆ ಬಳಿಯ ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಗುರುವಾರ ಅಪಘಾತ ಸಂಭವಿಸಿದ್ದು, ಆರು ವರ್ಷದ ಬಾಲಕಿ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕೆಯ ತಾಯಿ ಅಮೃತಾ ನಾಯ್ಡು ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

‘ಸ್ಥಳೀಯ ನಿವಾಸಿ ಸಮನ್ವಿ ಹಾಗೂ ನಟಿಯಾದ ಅಮೃತಾ ನಾಯ್ಡು, ಕಲರ್ಸ್ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್‌ ಸ್ಟಾರ್’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳಾಗಿದ್ದರು. ಕೆಲಸ ನಿಮಿತ್ತ ತಾಯಿ– ಮಗಳು ಸೇರಿ ಟಿವಿಎಸ್ ಸ್ಕೂಟಿಯಲ್ಲಿ ಹೊರಟಿದ್ದಾಗ ಲಾರಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ’ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ತಿಳಿಸಿದರು.

‘ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ಮಂಜೇಗೌಡ ಎಂಬಾತನನ್ನು ಬಂಧಿಸಲಾಗಿದೆ. ಸಮನ್ವಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಹೇಳಿದರು.

ಮೆಟ್ರೊ ನಿಲ್ದಾಣಕ್ಕೆ ಹೊರಟಿದ್ದರು

‘ವಾಜರಹಳ್ಳಿ ನಿವಾಸಿ ಅಮೃತಾ ಹಾಗೂ ಮಗಳು ಸಮನ್ವಿ, ಸಮೀಪದಲ್ಲೇ ಇದ್ದ ಮೆಟ್ರೊ ನಿಲ್ದಾಣಕ್ಕೆ ಸ್ಕೂಟಿಯಲ್ಲಿ ಹೊರಟಿದ್ದರು. ಅದೇ ಸಂದರ್ಭದಲ್ಲಿ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಲಾರಿ, ಸ್ಕೂಟಿಗೆ ಗುದ್ದಿತ್ತು’ ಎಂದು ಪೊಲೀಸರು ತಿಳಿಸಿದರು.

‘ಸೊಂಟ ಹಾಗೂ ತೊಡೆಗೆ ತೀವ್ರ ಪೆಟ್ಟು ಬಿದ್ದು ಸಮನ್ವಿ ಮೃತಪಟ್ಟಿದ್ದಾರೆ. ಗಾಯಾಳು ಅಮೃತಾ ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಮೃತ ಸಮನ್ವಿ, ಹರಿಕಥಾ ಗಾಯಕ ಗುರುರಾಜ ನಾಯ್ಡು ಅವರ ಮೊಮ್ಮಗಳು’ ಎಂದೂ ವಿವರಿಸಿದರು.

ಈ ಹಿಂದೆಯೂಅಮೃತಾ ಅವರ ಮಗುವೊಂದು ಮೃತಪಟ್ಟಿತ್ತು.ಅವರೀಗ ಗರ್ಭಿಣಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT