ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆಜಾನ್ ಪ್ರೈಮ್‌ನಲ್ಲಿ ಸಮಂತಾ ರುತ್ ಪ್ರಭು ಅಭಿನಯದ ಯಶೋಧಾ

ಸಮಂತಾ ನೂತನ ಚಿತ್ರ ಅಮೆಜಾನ್ ಪ್ರೈಮ್‌ನಲ್ಲಿ ಪ್ರಸಾರವಾಗಲಿದೆ.
Last Updated 6 ಡಿಸೆಂಬರ್ 2022, 11:26 IST
ಅಕ್ಷರ ಗಾತ್ರ

ಬೆಂಗಳೂರು: ನಟಿ ಸಮಂತಾ ರುತ್ ಪ್ರಭು ಅಭಿನಯದ ‘ಯಶೋಧಾ‘ ಚಿತ್ರ ಅಮೆಜಾನ್ ಪ್ರೈಮ್ ಒಟಿಟಿ ವೇದಿಕೆ ಮೂಲಕ ಪ್ರಸಾರವಾಗಲಿದೆ.

ಡಿಸೆಂಬರ್ 9ರ ಶುಕ್ರವಾರದಿಂದ ಅಮೆಜಾನ್ ಪ್ರೈಮ್ ಮೂಲಕ ಯಶೋಧಾ ಪ್ರಸಾರವಾಗಲಿದೆ ಎಂದು ಕಂಪನಿ ಹೇಳಿದೆ.

ಯಶೋಧಾ ಚಿತ್ರ ತೆಲುಗು ಭಾಷೆಯ ಜತೆಗೆ, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂನಲ್ಲೂ ಲಭ್ಯವಾಗಲಿದೆ.

ಹರೀಶ್ ನಾರಾಯಣ್ ಮತ್ತು ಕೆ. ಹರಿ ಶಂಕರ್ ನಿರ್ದೇಶನದ ಚಿತ್ರದಲ್ಲಿ ಸಮಂತಾ ಅವರು ಯಶೋಧಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನವೆಂಬರ್ 11ರಂದು ಚಿತ್ರಮಂದಿರದಲ್ಲಿ ಬಿಡುಗಡೆಯಾಗಿದ್ದ ಯಶೋಧಾ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT