ಭಾನುವಾರ, ಜೂನ್ 7, 2020
28 °C

ಧಾರಾವಾಹಿ ಚಿತ್ರೀಕರಣಕ್ಕೆ ಅನುಮತಿ– ಸಚಿವ ಆರ್. ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‌ಡೌನ್‌ ಪರಿಣಾಮದಿಂದ  ನಿಂತು ಹೋಗಿದ್ದ ಧಾರಾವಾಹಿ ಶೂಟಿಂಗ್‌ಗೆ ಚಾಲನೆ ಸಿಕ್ಕಿದ್ದು ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.

ಈ ವಿಷಯ ತಿಳಿಸಿದ ಕಂದಾಯ ಸಚಿವ ಆರ್‌. ಅಶೋಕ, ‘ಆರು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಧಾರಾವಾಹಿಗಳನ್ನು ಅವಲಂಬಿಸಿದ್ದಾರೆ. ಮನೆಯ ಒಳಗಡೆ ನಡೆಯುವ ಚಿತ್ರೀಕರಣಕ್ಕೆ ಮಾತ್ರ ಅನುಮತಿ ನೀಡಲಾಗಿದೆ’ ಎಂದರು.

‘ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಚಿತ್ರೀಕರಣ ನಡೆಸುವಂತೆ ಸೂಚನೆ ನೀಡಲಾಗಿದೆ. ಆದರೆ, ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದರು.

ಆದರೆ, ಸಿನಿಮಾ ಮತ್ತು ರಿಯಾಲಿಟಿ ಷೋಗಳ ಚಿತ್ರೀಕರಣಕ್ಕೆ ಯಾವುದೇ ಅವಕಾಶ ನೀಡಲಾಗಿಲ್ಲ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು