ಸೋಮವಾರ, ಸೆಪ್ಟೆಂಬರ್ 20, 2021
20 °C

Bigg Boss 8: ಫಿನಾಲೆಯಿಂದ ಹೊರಬಿದ್ದ ಪ್ರಶಾಂತ್ ಸಂಬರಗಿ, ವೈಷ್ಣವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಗ್ ಬಾಸ್ ಸೀಸನ್ 8 ರ ಟಾಪ್ 5ರಲ್ಲಿ ಇಬ್ಬರು ಹೊರಬಿದ್ದಿದ್ದಾರೆ. ಶನಿವಾರದ ಸಂಚಿಕೆಯಲ್ಲಿ ಪ್ರಶಾಂತ್ ಸಂಬರಗಿ ಮತ್ತು ವೈಷ್ಣವಿ ಎಲಿಮಿನೇಟ್ ಆಗಿದ್ದಾರೆ. 

ಪ್ರಶಾಂತ್ ಸಂಬರಗಿಗೆ 6.69 ಲಕ್ಷಕ್ಕೂ ಅಧಿಕ ಮತಗಳು ಬಿದ್ದಿದ್ದರೆ, ವೈಷ್ಣವಿಗೆ 10 ಲಕ್ಷಕ್ಕೂ ಅಧಿಕ ಮತಗಳು ಬಿದ್ದಿದ್ದವು.

ಇಂದು ಫಿನಾಲೆಯ ಎರಡನೇ ಸಂಚಿಕೆ ಪ್ರಸಾರವಾಗಲಿದ್ದು, ಕೆ.ಪಿ. ಅರವಿಂದ್, ಮಂಜು ಪಾವಗಡ, ದಿವ್ಯಾ ಉರುಡುಗ ಅವರಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುತೂಹಲ‌ ಮನೆಮಾಡಿದೆ.

ಮನೆಯ ಸ್ಪರ್ಧಿಗಳು ಮತ್ತು ಮಾಜಿ ಸ್ಪರ್ಧಿಗಳ ನಿರೀಕ್ಷೆ ಮೀರಿ ದಿವ್ಯಾ ಉರುಡುಗ ಅವರು ಸೇಫ್ ಆಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು