ಮಂಗಳವಾರ, ಮೇ 24, 2022
27 °C

ತಮಿಳು ಕಿರುತೆರೆ ನಟ ಇಂದಿರಾ ಕುಮಾರ್‌ ನಿಧನ: ಆತ್ಮಹತ್ಯೆ ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಮಿಳು ಕಿರುತೆರೆ ನಟ ಇಂದಿರಾ ಕುಮಾರ್ ಮೃತಪಟ್ಟಿದ್ದು ಅವರ ಮೃತದೇಹ ಚೆನ್ನೈನ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದೆ. ಮೂಲಗಳ ಪ್ರಕಾರ ಈ ನಟ ಸ್ನೇಹಿತನನ್ನು ಭೇಟಿಯಾಗಲು ಅವರ ಮನೆಗೆ ಹೋಗಿದ್ದರು. ರಾತ್ರಿ ಇಬ್ಬರೂ ಒಟ್ಟಿಗೆ ಸಿನಿಮಾ ನೋಡಿದ್ದರು. ನಂತರ ಕೋಣೆಯೊಳಗೆ ತೆರಳಿದ್ದ ಇಂದಿರಾ ಅವರು ಬಹಳ ಹೊತ್ತಿನ ತನಕ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡ ಸ್ನೇಹಿತ ಕೋಣೆಯಲ್ಲಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ತಕ್ಷಣಕ್ಕೆ  ಪೊಲೀಸರಿಗೆ ಮಾಹಿತಿ ತಿಳಿಸಿದ್ದರು ಇಂದಿರಾ ಅವರ ಸ್ನೇಹಿತ. ಇವರ ಸಾವಿನ ಬಗ್ಗೆ ತನಿಖೆ ಆರಂಭವಾಗಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡ್ಯೊಯಲಾಗಿದೆ.

ಈ ಸಾವನ್ನು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅವರ ಬಳಿ ಯಾವುದೇ ಡೆತ್‌ನೋಟ್ ಕೂಡ ಸಿಕ್ಕಿಲ್ಲ. ಶ್ರೀಲಂಕಾ ಮೂಲದ ಇಂದಿರಾ ಕುಮಾರ್ ತಮಿಳು ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ನಟನಾ ಅವಕಾಶಗಳಿಗಾಗಿ ಹೆಣಗಾಡುತ್ತಿದ್ದ ಇವರು ಅವಕಾಶಗಳಿಗಾಗಿ ಎದುರು ನೋಡುತ್ತಿದ್ದರು ಎನ್ನಲಾಗುತ್ತಿದೆ. ಇವರಿಗೆ ಹೆಂಡತಿ ಹಾಗೂ ಮಗು ಇದ್ದಾರೆ.

ಈ ತಿಂಗಳ ಆರಂಭದಲ್ಲಿ ನಟ ಶ್ರೀವಾಸ್ತವ್‌ ಚಂದ್ರಶೇಖರ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು