ಮಂಗಳವಾರ, ಜನವರಿ 26, 2021
16 °C

ನೇಣು ಬಿಗಿದ ಸ್ಥಿತಿಯಲ್ಲಿ ತಮಿಳುನಾಡು ಖ್ಯಾತ ಕಿರುತೆರೆ ನಟಿ ಮೃತದೇಹ ಪತ್ತೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ವಿಜೆ ಚಿತ್ರಾ (ಇನ್‌ಸ್ಟಾಗ್ರಾಂ)

ಚೆನ್ನೈ: ತಮಿಳುನಾಡಿನ ಜನಪ್ರಿಯ ಕಿರುತೆರೆ ನಟಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಟಿ ಹಾಗೂ ನಿರೂಪಕಿ ವಿಜೆ ಚಿತ್ರಾ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.. ಚೆನ್ನೈನ ಪಂಚತಾರಾ ಹೋಟೆಲ್‌ನಲ್ಲಿ ನಟಿ ಚಿತ್ರಾ ಮೃತದೇಹ ಪತ್ತೆಯಾಗಿದೆ.

ಪ್ರಾಥಮಿಕ ತನಿಖೆಯಲ್ಲಿ 28ರ ಹರೆಯದ ನಟಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ. ಚೆನ್ನೈನ ನಜರೇತ್‌ಪೆಟ್ಟೈನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ಮಂಗಳವಾರ ರಾತ್ರಿ ನಟಿಯ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಜನಪ್ರಿಯ ಪಾಂಡಿಯನ್ ಸ್ಟೋರ್ಸ್‌ ಧಾರಾವಾಹಿಯಲ್ಲಿ ಮುಲ್ಲೈಪಾತ್ರದಲ್ಲಿ ನಟಿಸಿ ಖ್ಯಾತಿ ಪಡೆದಿರುವ ಚಿತ್ರಾ, ಹೆಚ್ಚಿನ ಮನ್ನಣೆಗೆ ಪಾತ್ರವಾಗಿದ್ದರು. ಹೋಟೆಲ್ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ವರದಿಗಳ ಪ್ರಕಾರ, ನಟಿ ಚಿತ್ರಾ ಇವಿಪಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿಸಿದ ಬಳಿಕ ಮಂಗಳವಾರ ರಾತ್ರಿ ಹೋಟೆಲ್ ಕೋಣೆಗೆ ಮರಳಿದ್ದರು. ನಟಿ ತನ್ನ ಪ್ರಿಯಕರ ಹೇಮಂತ್ ಅವರೊಂದಿಗೆ ಹೋಟೆಲ್‌ನಲ್ಲಿ ಇದ್ದರು ಎಂದು ವರದಿಯಾಗಿದೆ.

ಚಿತ್ರೀಕರಣದಿಂದ ಹಿಂದಿರುಗಿದ ನಂತರ ಸ್ನಾನಕ್ಕೆ ಹೋಗುವುದಾಗಿ ನಟಿ ಹೇಳಿದ್ದಾಗಿ ಹೇಮಂತ್ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತುಂಬಾ ಹೊತ್ತಾದರೂ ನಟಿ ಹೊರಗೆ ಬರಲಿಲ್ಲ. ಬಾಗಿಲು ಬಡಿದರೂ ಪ್ರತಿಕ್ರಿಯಿಸಲಿಲ್ಲ. ಬಳಿಕ ಹೋಟೆಲ್ ಸಿಬ್ಬಂದಿಗೆ ಕರೆ ಮಾಡಿ ನಕಲಿ ಕೀಲಿಯೊಂದಿಗೆ ಕೊಠಡಿ ತೆರೆದು ನೋಡಿದಾಗ ಚಿತ್ರಾ ಮೃತದೇಹ ಸೀಲಿಂಗ್ ಫ್ಯಾನ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು