ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಯಾಲಿಟಿ ಶೋ ಕೊರಿಯೊಗ್ರಾಫರ್ ಟೀನಾ ಸಿಧು ಅನುಮಾನಾಸ್ಪದ ಸಾವು

ಅಕ್ಷರ ಗಾತ್ರ

ಹೈದರಾಬಾದ್‌: ತೆಲುಗು ರಿಯಾಲಿಟಿ ಶೋ ಕೊರಿಯೊಗ್ರಾಫರ್ ಟೀನಾ ಸಿಧು ಅವರು ಗೋವಾದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.

ಟೀನಾ ಅವರು ಹೃದಯಾಘಾತದಿಂದ ಸಾವಿಗೀಡಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಟೀನಾ ಸಾವು ಕುರಿತು ಕೊರಿಯೊಗ್ರಾಫರ್ ಆಟ ಸಂದೀಪ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಟೀನಾ ಅವರ ನಿಧನ ಸುದ್ದಿ ತಿಳಿದು ಆಘಾತವಾಗಿದೆ. ಡಾನ್ಸ್ ರಿಯಾಲಿಟಿ ಶೋನಲ್ಲಿ ಟೀನಾ ನನ್ನ ಜೋಡಿಯಾಗಿದ್ದರು. ಅವರು ತುಂಬಾ ಸೌಮ್ಯ ಸ್ವಭಾವದವರಾಗಿದ್ದರು. ಅವರ ಕುಟುಂಬದವರಿಗೆ ಈ ನೋವು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ಟೀನಾ ಆತ್ಮಕ್ಕೆಶಾಂತಿ ಸಿಗಲಿ’ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಸಹ ಸ್ಪರ್ಧಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಟೀನಾ ಅಗಲಿಕೆಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಟೀನಾ ಸದಾ ಸಕ್ರಿಯರಾಗಿದ್ದರು. ಪಾಪ್ ಗಾಯಕಿಯೂಆಗಿದ್ದ ಅವರು ‘ಆಟಾ ರಿಯಾಲಿಟಿ ಶೋ’ನ ತೀರ್ಪುಗಾರ್ತಿಯಾಗಿದ್ದರು.

ಟೀನಾ ಮದುವೆಯಾದ ಬಳಿಕ ಗೋವಾದಲ್ಲಿ ನೆಲೆಸಿದ್ದರು. ಅವರು ಪೋಷಕರು ಆಂಧ್ರ ಪ್ರದೇಶದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT