ಮಂಗಳವಾರ, ಆಗಸ್ಟ್ 16, 2022
29 °C

ಕೋವಿಡ್–19: ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಕಿರುತೆರೆ ನಟಿ ದಿವ್ಯಾ ಭಟ್ನಾಗರ್‌ (34) ಅವರು ಕೋವಿಡ್–19 ಹಾಗೂ ನ್ಯುಮೋನಿಯಾದಿಂದಾಗಿ ಇಂದು ಮುಂಬೈನಲ್ಲಿ ಮೃತಪಟ್ಟಿದ್ದಾರೆ.

ಕಳೆದವಾರ ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವೆಂಟಿಲೇಟರ್‌ ಅಳವಡಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಕಠಿಣವಾಗಿದೆ ಎಂದು ಕುಟುಂಬದವರು ತಿಳಿಸಿದ್ದರು.

ನಟಿಯ ನಿಧನದ ಮಾಹಿತಿಯನ್ನು ಖಚಿತಪಡಿಸಿರುವ ಆಕೆಯ ಸ್ನೇಹಿತ ಯುವರಾಜ್‌ ರಘುವಂಶಿ ಅವರು, ‘ದಿವ್ಯ ರಾತ್ರಿ 3ಗಂಟೆಯಲ್ಲಿ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸೆವೆನ್‌ ಹಿಲ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ನನಗೆ ಮತ್ತು ಆಕೆಯ ಕುಟುಂಬಕ್ಕೆ ಇದು ದೊಡ್ಡ ಆಘಾತ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ತಿಳಿಸಿದ್ದಾರೆ.

ನಟಿ ಶಿಲ್ಪಾ ಶಿರೋರ್ಡಕರ್‌ ಅವರು, ‘ಎದೆಗುಂದಿದ್ದೇನೆ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

‘ಜೀವನವು ನಿನ್ನ ಪಾಲಿಗೆ ತುಂಬಾ ಕಠಿಣವಾಗಿತ್ತು ಎಂಬುದು ನನಗೆ ಗೊತ್ತು. ಆ ನೋವು ಅಸಹನೀಯವಾದುದು. ನೀನೀಗ ಎಲ್ಲ ದುಃಖ, ನೋವು, ಹತಾಶೆ, ಮೋಸ, ಸುಳ್ಳುಗಳಿಂದ ಮುಕ್ತವಾಗಿರಬೇಕು. ನಿನ್ನನ್ನು ತುಂಬಾ ಮಿಸ್‌ ಮಾಡಿಕೊಳ್ಳುತ್ತೇನೆ. ದೇವರು ನಿನ್ನ ಆತ್ಮಕ್ಕೆ ಶಾಂತಿ ನೀಡಲಿ’ ಎಂದು ಮತ್ತೊಬ್ಬ ನಟಿ ದೆವೋಲಿನಾ ಬರೆದುಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು