ಶುಕ್ರವಾರ, ಜುಲೈ 1, 2022
23 °C

ಪತ್ನಿ ಮೇಲೆ ಹಲ್ಲೆ: ಕಿರುತೆರೆ ನಟ ಕರಣ್‌ ಮೆಹ್ರಾ ಬಂಧನ, ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಪತ್ನಿಯನ್ನು ಥಳಿಸಿದ ಆರೋಪದ ಮೇಲೆ ಹಿಂದಿ ಕಿರುತೆರೆಯ ಜನಪ್ರಿಯ ನಟ ಕರಣ್ ಮೆಹ್ರಾ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಮಂಗಳವಾರ ಮುಂಜಾನೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಿರುತೆರೆ ನಟರಾಗಿರುವ ಪತ್ನಿ ನಿಶಾ ರಾವಲ್ ಮತ್ತು ಕರಣ್ ನಡುವೆ ಜಗಳ ನಡೆದಿದೆ. ನಂತರ ಕರಣ್ ವಿರುದ್ಧ ಪೊಲೀಸ್‌ಗೆ ದೂರು ನೀಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಕರಣ್ ಮೆಹ್ರಾ ಅವರು ಹಿಂದಿಯ ಜನಪ್ರಿಯ ಧಾರಾವಾಹಿ ‘ಯೆ ರಿಷ್ತಾ ಕ್ಯಾ ಕೆಹ್ಲತಾ ಹೈ‘ – ಧಾರಾವಾಹಿಯಲ್ಲಿ ನಟಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು