ಶನಿವಾರ, ಅಕ್ಟೋಬರ್ 24, 2020
18 °C
ಡ್ರಗ್ಸ್‌ ಜಾಲ ಪ್ರಕರಣ ತನಿಖೆ ನಡೆಸುತ್ತಿರುವ ಮಂಗಳೂರಿನ ಸಿಸಿಬಿ ಪೊಲೀಸರು

ಶುಕ್ರವಾರವೇ ವಿಚಾರಣೆಗೆ ಹಾಜರ್: ಅನುಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ‘ಮಂಗಳೂರು ಸಿಸಿಬಿ ಪೊಲೀಸರು ಇದೇ 26ಕ್ಕೆ (ಶನಿವಾರ) ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ನಾನು ಶುಕ್ರವಾರವೇ (ಸೆ.25) ಹೋಗುತ್ತೇನೆ. ವಿಳಂಬ ಮಾಡುವುದಿಲ್ಲ’ ಎಂದು ನಟಿ, ನಿರೂಪಕಿ ಅನುಶ್ರೀ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

‘ಯಾರೋ ಮಾಡಿದ ಆರೋಪಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ಪೊಲೀಸರು ನನ್ನ ವಿರುದ್ಧ ಯಾವುದೇ ಆರೋಪಗಳನ್ನು ಮಾಡಿಲ್ಲ. ಅವರು ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ನಾನು, ನನಗೆ ತಿಳಿದಿರುವ ಎಲ್ಲ ಮಾಹಿತಿಯನ್ನು ನೀಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.

ಡ್ರಗ್ಸ್ ಜಾಲ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಮಂಗಳೂರಿನ ಸಿಸಿಬಿ ಪೊಲೀಸ್ ಜಾರಿಗೊಳಿಸಿದ ನೋಟಿಸ್‌ ಅನ್ನು, ಇನ್‌ಸ್ಪೆಕ್ಟರ್ ಪ್ರದೀಪ್ ಗುರುವಾರ ಸಂಜೆ ಬೆಂಗಳೂರಿನಲ್ಲಿ ಅನುಶ್ರೀ ಅವರಿಗೆ ನೀಡಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು