ಬುಧವಾರ, ಜೂನ್ 16, 2021
27 °C

ಕೋವಿಡ್‌ ಹಿನ್ನೆಲೆ: ಧಾರಾವಾಹಿ, ರಿಯಾಲಿಟಿ ಷೋ ಶೂಟಿಂಗ್‌ ಬಂದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌–19 ಎರಡನೇ ಅಲೆ ವಿಪರೀತ ಹಬ್ಬುತ್ತಿರುವ ಕಾರಣ ರಾಜ್ಯ ಸರ್ಕಾರ ಮೇ 10ರಿಂದ ಲಾಕ್‌ಡೌನ್‌ ಘೋಷಣೆ ಮಾಡಿರುವ ಕಾರಣ ಯಾವುದೇ ಧಾರಾವಾಹಿ, ರಿಯಾಲಿಟಿ ಷೋ ಚಿತ್ರೀಕರಣ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ಕರ್ನಾಟಕ ಟೆಲಿವಿಷನ್‌ ಅಸೋಸಿಯೇಷನ್‌ ಅಧ್ಯಕ್ಷ ಎಸ್‌.ವಿ. ಶಿವಕುಮಾರ್‌ ತಿಳಿಸಿದ್ದಾರೆ.

‘ಕೋವಿಡ್‌ –19ನ ಎರಡನೇ ಅಲೆಯ ಹಾವಳಿಯಿಂದಾಗಿ ಚಿತ್ರರಂಗವು ಹಲವಾರು ಕಲಾವಿದರು, ತಂತ್ರಜ್ಞರನ್ನು ಕಳೆದುಕೊಂಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಲಾಕ್‌ಡೌನ್‌ ಘೋಷಿಸಿರುವುದು ಶ್ಲಾಘನೀಯ’ ಎಂದಿರುವ ಅವರು, ‘ಮೇ 10ರಿಂದ 24ರವರೆಗೆ ಯಾರೂ ಕೂಡಾ ರಾಜ್ಯದ ಯಾವುದೇ ಭಾಗದಲ್ಲಿ ಚಿತ್ರೀಕರಣ ನಡೆಸಲೇಬಾರದು. ಒಂದು ವೇಳೆ ಯಾರಾದರೂ ಕದ್ದು ಮುಚ್ಚಿ ಚಿತ್ರೀಕರಣ ಮಾಡುವುದು ತಿಳಿದು ಬಂದಲ್ಲಿ, ಕೋವಿಡ್ ನಿಯಮ ಉಲ್ಲಂಘನೆ ಪ್ರಕಾರ ಸರ್ಕಾರ ಕೈಗೊಳ್ಳುವ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಮೇ 24ರ ಬಳಿಕ ಪರಿಸ್ಥಿತಿ ಅವಲೋಕಿಸಿ ಚಿತ್ರೀಕರಣ ‍ಪುನರಾರಂಭ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು