ಬುಧವಾರ, ನವೆಂಬರ್ 25, 2020
21 °C

ಜೀ ಕುಟುಂಬ ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೀ ಕನ್ನಡ ವಾಹಿನಿಯು ನಾಯಂಡಹಳ್ಳಿ ಬಳಿಯ ನಂದಿ ಲಿಂಕ್ ಮೈದಾನದಲ್ಲಿ ಅದ್ದೂರಿಯಾಗಿ ‘ಜೀ ಕುಟುಂಬ ಅವಾರ್ಡ್ಸ್ 2020’ ಕಾರ್ಯಕ್ರಮವನ್ನು ನಡೆಸಿ, ಕಿರುತೆರೆ ಕಲಾವಿದರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿತು. 

‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಒಟ್ಟು 44 ಪ್ರಶಸ್ತಿ ವಿಭಾಗಗಳಿದ್ದವು. ಅವುಗಳಲ್ಲಿ ಆರು ಜನಪ್ರಿಯ ವಿಭಾಗಗಳನ್ನು ಜನರ ಮೂಲಕವೇ ವಾಹಿನಿ ಆಯ್ಕೆ ಮಾಡಿದೆ. ಈ ಸಂಬಂಧ ವೀಕ್ಷಕರಿಂದಲೆ ಮತಗಳನ್ನು ಸಂಗ್ರಹಿ ಸಲಾಗಿತ್ತು. ಪೊಲೀಸ್ ಇಲಾಖೆಯ ಆಂತರಿಕಾ ಭದ್ರತಾ ವಿಭಾಗದ ಮುಖ್ಯಸ್ಥ ಭಾಸ್ಕರ್ ರಾವ್ ಹಾಗೂ ಚಲನಚಿತ್ರ ನಟ ರಮೇಶ್ ಅರವಿಂದ ಅವರು ಪ್ರಶಸ್ತಿಗಳನ್ನು ವಿತರಿಸಿದರು.

ಡಾಲಿ ಧನಂಜಯ್, ಅಮೃತಾ ಅಯ್ಯಂಗಾರ್, ಚರಣ್ ರಾಜ್, ಜೈ ಜಗದೀಶ್, ಮೋಹನ್, ನಿಶ್ವಿಕಾ ನಾಯ್ಡು ಸೇರಿದಂತೆ ಚಲನಚಿತ್ರದ ವಿವಿಧ ಕಲಾವಿದರು ಭಾಗವಹಿಸಿ, ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ‘ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್’ ಧಾರಾವಾಹಿಯ ಹೊಸ ಹಾಡನ್ನು ನಟ ಯಶ್ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮವು ಇದೇ ಶನಿವಾರ ಮತ್ತು ಭಾನುವಾರ ಸಂಜೆ 7ಕ್ಕೆ ಪ್ರಸಾರ ಆಗಲಿದೆ ಎಂದು ವಾಹಿನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು