ಗುರುವಾರ , ಆಗಸ್ಟ್ 5, 2021
28 °C

ಸಿದ್ದಾಪುರದ ಹಲಗೇರಿಯಲ್ಲಿ 10 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಸಿದ್ದಾಪುರ ತಾಲ್ಲೂಕಿನ ಹಲಗೇರಿಯ ಮನೆಯೊಂದರಲ್ಲಿ ಕಾಣಿಸಿಕೊಂಡಿದ್ದ ಹತ್ತು ಅಡಿಯಷ್ಟು ಉದ್ದದ ಕಾಳಿಂಗ ಸರ್ಪವನ್ನು ನಗರದ ಉರಗಪ್ರೇಮಿ ಪ್ರಶಾಂತ ಹುಲೇಕಲ್ ಶನಿವಾರ ಸಂಜೆ ಸೆರೆಹಿಡಿದು ಕಾಡಿಗೆ ಬಿಟ್ಟರು.

ಯಶವಂತ ನಾಯ್ಕ ಎಂಬುವವರ ಮನೆಯ ಚಾವಣಿಯಲ್ಲಿ ಹಾವು ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಅರಣ್ಯ ಇಲಾಖೆಯವರು ಪ್ರಶಾಂತ ಅವರಿಗೆ ಮಾಹಿತಿ ನೀಡಿದ್ದರು. ಹಾವನ್ನು ಸುರಕ್ಷಿತವಾಗಿ ಹಿಡಿದ ಅವರು ಬಳಿಕ ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಹಕಾರದೊಂದಿಗೆ ಅರಣ್ಯಕ್ಕೆ ಬಿಟ್ಟರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.