ಇಂಡಿ: ಪ್ರಕೃತಿ ಸಮತೋಲನ ಕಾಯ್ದುಕೊಂಡಾಗ ಮಾತ್ರ ಪ್ರಾಣಿ, ಪಕ್ಷಿ, ಮನುಷ್ಯ ಬದುಕು ಸಾಗಿಸಲು ಸಾಧ್ಯ. ಹೀಗಾಗಿ ಪ್ರತಿಯೊಬ್ಬರೂ ಪ್ರಕೃತಿಯನ್ನು ಪ್ರೀತಿಸಬೇಕು. ಪ್ರಾಣಿ, ಪಕ್ಷಿಗಳಿಗೆ ನೀರು, ಕಾಳು ಒದಗಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು ಎಂದು ಯಶವಂತರಾಯಗೌಡ ಪಾಟೀಲ ಫೌಂಡೇಷನ್ ಅಧ್ಯಕ್ಷ ವಿಠಲಗೌಡ ಪಾಟೀಲ ಹೇಳಿದರು.

ಅವರು ನಗರದ ವಾರ್ಡ್ 19ರಲ್ಲಿ ಯಶವಂತರಾಯಗೌಡ ವಿ. ಪಾಟೀಲ ಫೌಂಡೇಶನ್ ಭಾನುವಾರ ಹಮ್ಮಿಕೊಂಡಿದ್ದ ಹಕ್ಕಿಗೊಂದು ಹನಿ ನೀರು ಅಭಿಯಾನ -2026ಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಾವಳಸಂಗ, ಬಬಲಾದ, ಜೇವೂರ ಹಾಗೂ ಇಂಡಿ ಸೇರಿದಂತೆ ಹಲವು ಕಡೆಗಳಲ್ಲಿ ಅರಣ್ಯ ಇಲಾಖೆ ಗಿಡ ಮರಗಳನ್ನು ಬೆಳೆಸುವುದರ ಜೊತೆ ಅರಣ್ಯ ಬೆಳವಣಿಗೆಗೆ ಶ್ರಮಿಸುತ್ತಿರುವುದು ಸಂತಸದ ಸಂಗತಿ ಎಂದರು.

ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಅರಣ್ಯ ಇಲಾಖೆಯ ಆರ್.ಎಫ್.ಓ ಎಸ್.ಜಿ.ಸಂಗಾಲಕ, ಮಂಜುನಾಥ ಧೂಳೆ, ಧನರಾಜ ಮುಜಗೊಂಡ ಮಾತನಾಡಿದರು.

ಪುರಸಭೆ ಪೌರಾಯುಕ್ತ ಶಿವಾನಂದ ಪೂಜಾರಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಜೀತ ಧನಶೆಟ್ಟಿ, ನೀಲಕಂಠಗೌಡ ಪಾಟೀಲ, ಸುಧೀರ ಕರಕಟ್ಟಿ, ಸತೀಶ ಹತ್ತಿ, ಅವಿನಾಶ ಬಗಲಿ, ಸತೀಶ ಕುಂಬಾರ, ಸಣ್ಣಪ್ಪ ತಳವಾರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-26-1411084011

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.