ಶನಿವಾರ, ಡಿಸೆಂಬರ್ 14, 2019
25 °C

ಕೀಟ ತಜ್ಞ ಎಸ್‌.ಎಸ್‌. ಕಟಗಿಹಳ್ಳಿಮಠ್‌ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯದಲ್ಲಿ (ಜಿಕೆವಿಕೆ) ಕೀಟ ತಜ್ಞರಾಗಿದ್ದ ಪ್ರೊ. ಎಸ್‌.ಎಸ್‌. ಕಟಗಿಹಳ್ಳಿಮಠ್‌ (101) ಅವರು ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.

‘ಕೃಷಿ ಋಷಿ’ ಎಂದೇ ಪ್ರಸಿದ್ಧರಾಗಿದ್ದ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ. ಇವರು ಕೃಷಿ ಬಗ್ಗೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ. 

ಕೃಷಿ ಕಾಲೇಜಿನಲ್ಲಿ ಕೀಟಶಾಸ್ತ್ರ ಪಾಧ್ಯಾಪರಾಗಿ ಕಾರ್ಯನಿರ್ವಹಿಸಿದ್ದ ಅವರು ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಮೃತರು ಮಕ್ಕಳು, ಮೊಮ್ಮಕ್ಕಳನ್ನು ಅಗಲಿದ್ದಾರೆ.  ಅವರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ಚಾಮರಾಜಪೇಟೆ ರುದ್ರಭೂಮಿಯಲ್ಲಿ ನೇರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು