ಬುಧವಾರ, ಸೆಪ್ಟೆಂಬರ್ 29, 2021
20 °C

ಅಂತರರಾಷ್ಟ್ರೀಯ ಹುಲಿ ದಿನ: ನಮ್ಮ ಕೈಯಲ್ಲಿದೆ ವ್ಯಾಘ್ರನ ಉಳಿವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

PV Photo by Sathish B Aradhya

ಬೆಂಗಳೂರು: ಪರಿಸರ ವ್ಯವಸ್ಥೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಹುಲಿಯ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಜುಲೈ 29 ಅನ್ನು ಪ್ರತಿ ವರ್ಷ ಅಂತರರಾಷ್ಟ್ರೀಯ ಹುಲಿ ದಿನವನ್ನಾಗಿ ಆಚರಿಸಲಾಗುತ್ತದೆ.

ಆಹಾರ ಸರಪಣಿಯಲ್ಲೂ ಹುಲಿ ಅತ್ಯಂತ ಪ್ರಮುಖ ಸ್ಥಾನದಲ್ಲಿದೆ. ಆದರೆ ಪರಿಸರ ನಾಶ, ಹುಲಿಯ ಕಳ್ಳಬೇಟೆ, ಅಭಿವೃದ್ಧಿಯ ಹೆಸರಿನಲ್ಲಿ ನಡೆಸಲಾಗುವ ಕೆಲವೊಂದು ಕಾರ್ಯಗಳು ಹುಲಿ ಸಂತತಿ ಕ್ಷೀಣಿಸಲು ಕಾರಣವಾಗುತ್ತಿದೆ.

2010ರಲ್ಲಿ ಜುಲೈ 29ರಂದು ರಷ್ಯಾದ ಸೈಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಡೆದ ಹುಲಿ ಸಮಾವೇಶದಲ್ಲಿ ಜಗತ್ತಿನ ಬಹುತೇಕ ರಾಷ್ಟ್ರಗಳು ಹುಲಿ ಸಂರಕ್ಷಣೆಗೆ ಪಣ ತೊಟ್ಟು, ಒಪ್ಪಂದಕ್ಕೆ ಸಹಿ ಹಾಕಿದವು. ಅಂದಿನಿಂದ, ಈ ದಿನವನ್ನು ಪ್ರತಿ ವರ್ಷ ಜಾಗತಿಕವಾಗಿ ಅಂತರರಾಷ್ಟ್ರೀಯ ಹುಲಿ ದಿನವನ್ನಾಗಿ ಆಚರಿಸಲಾಗುತ್ತಿದೆ.

ಹುಲಿ ಸಂರಕ್ಷಣೆ, ಸಂಖ್ಯೆ ವೃದ್ಧಿ, ಅವುಗಳ ಓಡಾಟ, ಆಹಾರಕ್ಕೆ ಪೂರಕ ವಾತಾವರಣ ಕಲ್ಪಿಸುವುದು ಮತ್ತು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹುಲಿ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಅಂತರರಾಷ್ಟ್ರೀಯ ಹುಲಿ ದಿನಾಚರಣೆಯ ಪ್ರಮುಖ ಅಂಶವಾಗಿದೆ.

ಈ ವರ್ಷ ‘ಹುಲಿಗಳ ಉಳಿವು ನಮ್ಮ ಕೈಯಲ್ಲಿದೆ’ ಎನ್ನುವ ಘೋಷವಾಕ್ಯದೊಂದಿಗೆ ಅಂತರರಾಷ್ಟ್ರೀಯ ಹುಲಿ ದಿನ ಆಚರಿಸಲಾಗುತ್ತದೆ. ಜಾಗತಿಕ ಹುಲಿಗಳ ಸಂಖ್ಯೆಯ ಶೇ 70ರಷ್ಟು ನಮ್ಮ ದೇಶದಲ್ಲೇ ಇವೆ ಎನ್ನುವುದು ಹೆಮ್ಮೆಯ ವಿಚಾರವಾಗಿದೆ. ವರ್ಲ್ಡ್ ವೈಲ್ಡ್‌ಲೈಫ್ ಫಂಡ್ ಪ್ರಕಾರ ಜಾಗತಿಕವಾಗಿ 3,900 ಹುಲಿಗಳಷ್ಟೇ ಇವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು