ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದ ಪನ್ನಾ ಅರಣ್ಯದಲ್ಲಿ ಹೆಣ್ಣು ಹುಲಿ ಕಳೇಬರ ಪತ್ತೆ

10 ದಿನಗಳಲ್ಲಿ ಮಧ್ಯಪ್ರದೇಶದಲ್ಲಿ ಸಾವಿಗೀಡಾದ ನಾಲ್ಕನೇ ಹುಲಿ
Last Updated 16 ಮೇ 2021, 7:03 IST
ಅಕ್ಷರ ಗಾತ್ರ

ಭೋಪಾಲ್‌: ‘ಮಧ್ಯಪ್ರದೇಶದ ಪನ್ನಾ ಹುಲಿ ಮೀಸಲು ಅರಣ್ಯ ಪ್ರದೇಶದಲ್ಲಿ ರೇಡಿಯೊ ಕಾಲರ್‌ ಅಳವಡಿಸಿದ್ದ ಹೆಣ್ಣು ಹುಲಿಯ ಕಳೇಬರ ಪತ್ತೆಯಾಗಿದೆ’ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು.

ಇದು ಕಳೆದ 10 ದಿನಗಳಲ್ಲಿ ಮಧ್ಯಪ್ರದೇಶದಲ್ಲಿ ಸಾವಿಗೀಡಾದ ನಾಲ್ಕನೇ ಹುಲಿಯಾಗಿದೆ.

‘ಪನ್ನಾ ಹುಲಿ ಮೀಸಲು ಅರಣ್ಯ ಪ್ರದೇಶದ ಗಹ್ರೀಘಾಟ್ ವಲಯದಲ್ಲಿ ಹೆಣ್ಣು ಹುಲಿಯ ಕಳೇಬರ ಪತ್ತೆಯಾಗಿದ್ದು, ಇದನ್ನು ಪಿ–213(32) ಎಂದು ಗುರುತಿಸಲಾಗಿದೆ’ ಎಂದು ಅವರು ಹೇಳಿದರು.

‘ಮೇ 12 ರಂದು ಹೆಣ್ಣು ಹುಲಿಯ ಎಡ ಕಾಲಿನ ಮೇಲೆ ಊತ ಕಾಣಿಸಿಕೊಂಡಿರುವುದು ಗಮನಕ್ಕೆ ಬಂದಿತ್ತು. ಹುಲಿಗೆ ಚಿಕಿತ್ಸೆ ನೀಡಿ, ಬಿಡುಗಡೆಗೊಳಿಸಲಾಗಿತ್ತು. ಹುಲಿ ನೈಸರ್ಗಿಕ ಕಾರಣಗಳಿಂದ ಸಾವಿಗೀಡಾಗಿರಬಹುದು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT