ಶನಿವಾರ, ಡಿಸೆಂಬರ್ 3, 2022
21 °C

ಆನೆಗಳನ್ನು ರಕ್ಷಿಸಿ: ರಾಬರ್ಟ್ ಬೆಡಗಿ ಆಶಾ ಭಟ್ ಕರೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Asha Bhat Instagram

ಬೆಂಗಳೂರು: ಆಗಸ್ಟ್ 12 ರಂದು ಪ್ರತಿವರ್ಷ ಅಂತರರಾಷ್ಟ್ರೀಯ ಆನೆ ದಿನವನ್ನಾಗಿ ಆಚರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ರಾಬರ್ಟ್ ಚಿತ್ರದ ನಟಿ ಆಶಾ ಭಟ್ ಕೂಡ ಆನೆಯ ಬಗ್ಗೆ ಪ್ರೀತಿ ಮತ್ತು ಕಾಳಜಿ ವ್ಯಕ್ತಪಡಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಟಿ ಆಶಾ ಭಟ್, ‘ಹಾಥಿ ಮೇರೆ ಸಾಥಿ’ ಎಂಬ ಅಡಿಬರಹದೊಂದಿಗೆ ಆನೆಯ ಜತೆಗಿರುವ ಫೋಟೊ ಪೋಸ್ಟ್ ಮಾಡಿದ್ದಾರೆ.

ಆನೆಗಳು ಗಾತ್ರದಲ್ಲಿ ದೊಡ್ಡದಾಗಿ ಕಂಡರೂ, ಅವು ಪಾಪದ ಪ್ರಾಣಿಯಾಗಿದೆ. ಆನೆಗಳನ್ನು ರಕ್ಷಿಸಲು ಮತ್ತು ಅವುಗಳ ಬಗ್ಗೆ ಕಾಳಜಿ ವಹಿಸಲು ನಾವೆಲ್ಲ ಒಂದಾಗಬೇಕು ಎಂದು ನಟಿ ಆಶಾ ಭಟ್ ಹೇಳಿದ್ದಾರೆ.

ಜಾಗತಿಕ ಆನೆ ದಿನದ ಸಂದರ್ಭದಲ್ಲಿ ಸೆಲೆಬ್ರಿಟಿಗಳು ಕೂಡ ಆನೆಯ ಕುರಿತ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ಬಾಲಿವುಡ್ ನಟಿ ದಿಯಾ ಮಿರ್ಜಾ, ನಟಿ ಶ್ರುತಿ ಹಾಸನ್ ಕೂಡ ಆನೆಯ ಸಂರಕ್ಷಣೆ ಬಗ್ಗೆ ಕರೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು